December 5, 2024

Hampi times

Kannada News Portal from Vijayanagara

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಪ್ರವಾಸ ಕಾರ್ಯಕ್ರಮ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಅಕ್ಟೋಬರ್ 19ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.19ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್‍ಜಿಟಿ ಕಾಲೇಜಿನಲ್ಲಿ 2021-22ನೇ ಸಾಲಿನ ಕರ್ನಾಟಕ ಲಲಿತಾ ಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ಗೋವಿಂದವಾಡ ಇವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಕುರಿತಂತೆ ಜಿಲ್ಲೆಯ ಹಿರಿಯ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಕಲಾವಿದರುಗಳ ಜೊತೆ ಚರ್ಚಿಸಲಿದ್ದಾರೆ.
ಸಂಜೆ 5.30ಕ್ಕೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಶ್ರೀ ನಾಗನಾಥೇಶ್ವರ ದೇವಾಲಯದ ಆವರಣದಲ್ಲಿ ಸಿರಿಗೇರಿ ಯರ್ರಿಸ್ವಾಮಿ ಅವರು ಆಯೋಜಿಸಿರುವ “ಕನ್ನಡ ಸಿನಿಮಾ-ಕನ್ನಡ ಹಾಡು” ಎಂಬ ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ 8.30ಕ್ಕೆ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!