https://youtu.be/NHc6OMSu0K4?si=SI_K4goOPEgwo6h2
HAMPI TIMES
ಹೊಸಪೇಟೆ: ವಿಜಯನಗರ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರವನ್ನು ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಯ ಎದುರು ಬಸವಣ್ಣ ಮಂಟಪ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್ ತಿಳಿಸಿದರು.
ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಬೆಳಗ್ಗೆ 11 ಗಂಟೆಗೆ ಮೊದಲಿಗೆ ಕುವೆಂಪು ರಚಿತ ನಾಡಗೀತೆ, ಶ್ರೀ ಹುಯಿಲುಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ರಚಿತ ಬಾರಿಸು ಕನ್ನಡ ಡಿಂಡಿಮವ, ಡಾ: ಡಿ.ಎಸ್.ಕರ್ಕಿ ರಚಿತ ಹಚ್ಚೇವು ಕನ್ನಡದ ದೀಪ ಮತ್ತು ಕವಿ ಚನ್ನವೀರ ಕಣವಿ ರಚಿತ ವಿಶ್ವವಿನೂತನ ವಿದ್ಯಾಚೇತನ ಹಾಡುಗಳನ್ನು ವಿಜಯನಗರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಏಕಕಾಲದಲ್ಲಿ ಹಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಎದುರು ಬಸವಣ್ಣ ಮಂಟಪದ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನರು ಗಾಯನಕ್ಕೆ ಧ್ವನಿಗೂಡಿಸಲಿದ್ದಾರೆ. ಇದೇ ಸಮಯದಲ್ಲಿ ಹೊಸಪೇಟೆ ಟಿ.ಬಿ.ಡ್ಯಾಂ ಆವರಣದಲ್ಲಿ 20 ಸಾವಿರ, ಕೂಡ್ಲಿಗಿಯ ಉಜ್ಜಯಿನಿಪೀಠದಲ್ಲಿ 20 ಸಾವಿರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನದ ಆವರಣದಲ್ಲಿ 20 ಸಾವಿರ, ಹರಪನಹಳ್ಳಿಯ ಕೋಟೆ ಪ್ರದೇಶದಲ್ಲಿ 15 ಸಾವಿರ, ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದ ಆವರಣದಲ್ಲಿ 10 ಸಾವಿರ ಹಾಗೂ ಹಗರಿಬೊಮ್ಮನಹಳ್ಳಿಯ ಮಾಲ್ವಿಡ್ಯಾಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 10 ಸಾವಿರ ಜನರ ಸಮಕ್ಷಮದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳಿಗೆ ವಹಿಸಲಾದ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣನವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಗುರುಬಸವರಾಜ, ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮೆಹತಾ, ತಾ.ಪಂ. ಕಾರ್ಯನಿರ್ವಹಾಕ ಅಧಿಕಾರಿ ರಮೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಧಾರ್ಮಿಕದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
More Stories
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಕಲಾವಿದರಿಗೆ ಗುರುತಿನ ಚೀಟಿ ನೋಂದಣಿ ಪ್ರಾರಂಭ
ನಾ- ಸತ್ತಿಲ್ಲ ನಾಟಕ ಪ್ರದರ್ಶನ, ರಂಗ ಕಲೆಗೆ ಸಾವಿಲ್ಲ, ಕಲೆಗೆ ಜೀವ ತುಂಬಿದ ಕಲಾವಿದರು