https://youtu.be/NHc6OMSu0K4?si=SI_K4goOPEgwo6h2
HAMPI TIMES
ವಿಜಯನಗರ: ಒಕ್ಕಲಿಗ ಸಮುದಾಯಕ್ಕೆ ಸೇರಿದ ಪ್ರಸ್ತಕ ಸಾಲಿಗೆ ವೃತ್ತಿಪರ, ತಾಂತ್ರಿಕ, ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಾರ್ಷಿಕ ಗರಿಷ್ಠ ರೂ.1.ಲಕ್ಷಗಳಂತೆ ಅಥವಾ ವ್ಯಾಸಂಗದ ವಾಸ್ತವಿಕ ವೆಚ್ಚದ ಮಿತಿಗೆ ಒಳಪಟ್ಟ ಕೋರ್ಸ್ ಅವಧಿ ಅನುಸಾರ ರೂ.4 ಲಕ್ಷ ದಿಂದ ರೂ.5ಲಕ್ಷ ವಾರ್ಷಿಕ ಶೇ.2ರಷ್ಟು ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಅರ್ಹತೆಗಳು: ವಿದ್ಯಾರ್ಥಿ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನವು ರೂ.3.50 ಲಕ್ಷ ಮೀರಿರಬಾರದು, ಸರ್ಕಾರಿ ಕಾಲೇಜು, ಮಾನ್ಯತೆ ಪಡೆದ ಅನುದಾನಿತ ಅಥವಾ ಅನುದಾನರಹಿತ ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ, ತಾಂತ್ರಿಕ, ಉನ್ನತ ವ್ಯಾಸಂಗದ ಕೋರ್ಸ್‍ಗಳಲ್ಲಿ ಸಿ.ಇ.ಟಿ. ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು.
ಸಾಲ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರುಒನ್, ಕರ್ನಾಟಕಒನ್ ಸೇವಾಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdc.karnataka.gov.in/ ಆಥವಾ ದೂ.08392-267038 ಗೆ ಸಂಪರ್ಕಿಸಬಹುದಾಗಿದೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ