December 8, 2024

Hampi times

Kannada News Portal from Vijayanagara

ಅದಾಲತ್ ನಲ್ಲಿ 19,652 ಪ್ರಕರಣಗಳು ಇತ್ಯರ್ಥ

 

https://youtu.be/NHc6OMSu0K4?si=SI_K4goOPEgwo6h2

HAMPI TIMES

ಕೊಪ್ಪಳ: ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾದ್ಯಂತ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 19,652 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿದ್ದು, 21,64,97,614 ರೂ. ಮೊತ್ತದ ಪರಿಹಾರ ಕೊಡಿಸಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ತಿಳಿಸಿದ್ದಾರೆ.
ವಿದ್ಯುನ್ಮಾನದ ಮೂಲಕ ನಡೆದ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು 78, ಸಿವಿಲ್ ಪ್ರಕರಣಗಳು 229, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು 1628, ಚೆಕ್ ಬೌನ್ಸ್ ಪ್ರಕರಣಗಳು 186, ಇತರ ಕ್ರಿಮಿನಲ್ ಪ್ರಕರಣಗಳು 60, ವಿದ್ಯುತ್ ಪ್ರಕರಣಗಳ 158, ಇತರ ವ್ಯಾಜ್ಯ ಪೂರ್ವ ಪ್ರಕರಣಗಳು 17,293 ಹಾಗೂ 20 ನೀರಿನ ಬಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.

 

 

ಜಾಹೀರಾತು
error: Content is protected !!