December 8, 2024

Hampi times

Kannada News Portal from Vijayanagara

16ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಡಾ.ಕೆ.ರವೀಂದ್ರನಾಥ ಅವರಿಗೆ ಆಹ್ವಾನ

 

https://youtu.be/NHc6OMSu0K4?si=SI_K4goOPEgwo6h2

HAMPI TIMES

ಹೊಸಪೇಟೆ: ಕನ್ನಡ ಸಂಘ ಮಸ್ಕಟ್ ಮತ್ತು ಹೃದಯವಾಹಿನಿ ಕರ್ನಾಟಕ ಸಂಯುಕ್ತವಾಗಿ ನವೆಂಬರ್ 18 ಮತ್ತು 19 ರಂದು ಮಸ್ಕತ್ ನ ಅಲ್-ಫಲಾಜ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ 16ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಹೊರನಾಡ ಕನ್ನಡಿಗರ ಗೋಷ್ಠಿಯಲ್ಲಿ ಪಾಲ್ಗೊಳ್ಳಲು  ಕನ್ನಡ ವಿವಿ ಹಸ್ತಪ್ರತಿ ವಿಭಾಗದ ಮುಖ್ಯಸ್ಥ ಡಾ.ಕೆ.ರವೀಂದ್ರನಾಥ ಅವರನ್ನು ವಿಶ್ವಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಕೆ.ಪಿ.ಮಂಜುನಾಥ ಆಹ್ವಾನಿಸಿದ್ದಾರೆ.

ಸಮ್ಮೇಳನದಲ್ಲಿ ಕವಿಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಭರತನಾಟ್ಯ, ಜಾನಪದ ನೃತ್ಯ, ನೃತ್ಯರೂಪ, ಯಕ್ಷಗಾನ ಸೇರಿದಂತೆ ವಿವಿಧ ಕಲೆಗಳ ಪ್ರದರ್ಶನಗೊಳ್ಳಲಿವೆ. ಕರ್ನಾಟಕ ಕಲೆ ಮತ್ತು ಸಂಸ್ಕೃತಿ ವಿದೇಶಿ ನೆಲವಾದ  ಒಮಾನ್ ನಲ್ಲಿ ಪ್ರತಿಬಿಂಬಿಸಲಿದೆ.

 

 

ಜಾಹೀರಾತು
error: Content is protected !!