https://youtu.be/NHc6OMSu0K4?si=SI_K4goOPEgwo6h2
HAMPI TIMES
ಬಳ್ಳಾರಿ: 2020 ಮತ್ತು 2022ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಏಕಗವಾಕ್ಷಿ ಮತ್ತು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ನವೆಂಬರ್ 22ರಿಂದ 24ರವರೆಗೆ ಬೆಂಗಳೂರಿನ ಹಂಪಿನಗರದ ಪಶ್ಷಿಮ ವಲಯದ ನಗರ ಕೇಂದ್ರ ಗ್ರಂಥಾಲಯದ “ಗ್ರಂಥಾಂಗಣ”ದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು, ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 30 ರೊಳಗಾಗಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಬಿ. ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 08392-274113ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ