https://youtu.be/NHc6OMSu0K4?si=SI_K4goOPEgwo6h2
HAMPI TIMES
ಕೊಪ್ಪಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ರಾಜ್ಯಾದ್ಯಂತ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುತ್ತಿದ್ದಾರೆ. ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಕೈ ಆಕಾಂಕ್ಷಿಗಳ ದಂಡೆ ಇದೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.
ಖಾಸಗಿ ಕಾರ್ಯಕ್ರಮದಲ್ಲಿ ಥೇಟ್ ರಾಜಕೀಯ ಭಾಷಣ ಮಾಡಿದ ಸಿದ್ದು, ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಸದರಿ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಘಟಾನುಘಟಿ ಎಲ್ಲ ನಾಯಕರ ಬ್ಯಾನರ್ ಹಾಕಲಾಗಿತ್ತು. ಆದರೆ, ಎಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಫೋಟೊ ಕಾಣಲಿಲ್ಲ. ಗ್ರಾಮಕ್ಕೆ ತೆರಳುವ ರಸ್ತೆಯ ಎರಡೂ ಬದಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಸ್ವಾಮೀಜಿಗಳ ಕಟೌಟ್ ಕಂಡು ಬಂದವು. ಆದರೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಒಂದು ಸಣ್ಣ ಫೋಟೊ ಕೂಡ ಕಾಣ ಸಿಗಲಿಲ್ಲ.
ಕಾಂಗ್ರೆಸ್ ಬ್ಯಾನರ್ ನಡಿ ಕಾರ್ಯಕ್ರಮ ಮಾಡಿದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗಮನಕ್ಕೆ ತರಬೇಕಾಗುತ್ತದೆ ಎಂಬ ಕಾರಣಕ್ಕೆ ಖಾಸಗಿ ಕಾರ್ಯಕ್ರಮದ ನೆಪದಲ್ಲಿ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಗಳ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ತಮ್ಮ ಬೆಂಬಲಿಗರಿಗೆ ಟಿಕೇಟ್ ಫಿಕ್ಸ್ ಎಂಬ ಸಂದೇಶ ನೀಡಿದ್ದಾರೆ. ಆದರೆ, ಈ ಬೆಳವಣಿಗೆ ತಮಗೂ ಟಿಕೇಟ್ ಬೇಕು ಎಂದು ಅರ್ಜಿ ಸಲ್ಲಿಸಿದ್ದ ಕೊಪ್ಪಳ ಜಿಲ್ಲೆಯ ಆಕಾಂಕ್ಷಿಗಳಲ್ಲಿ ಇರಿಸು- ಮುರಿಸಿಗೆ ಕಾರಣವಾಗಿದೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ