November 7, 2024

Hampi times

Kannada News Portal from Vijayanagara

ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಗೌರವಧ್ಯಕ್ಷರಾಗಿ ಡಾ.ಎಂ.ಧರ್ಮನಗೌಡ ನೇಮಕ

 

https://youtu.be/NHc6OMSu0K4?si=SI_K4goOPEgwo6h2

 

 

HAMPI TIMES

ಹೊಸಪೇಟೆ:  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ವಿಜಯನಗರ ಜಿಲ್ಲಾ ಘಟಕಕ್ಕೆ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಎಂ.ಧರ್ಮನಗೌಡ  ಜಿಲ್ಲಾ ಗೌರವಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಎಂದು ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ ಬಡಿಗೇರ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಚನ್ನರಾಯಪಟ್ಟಣ ಮತ್ತು ವಿಜಯನಗರ ಜಿಲ್ಲಾ ಘಟಕದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಕ್ಕಳಲ್ಲಿನ ಸಾಹಿತ್ಯಾಭಿರುಚಿ, ಸೃಜನಶೀಲ ಬರವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆ ಹಾಗೂ ದೇಶಾಭಿಮಾನವನ್ನು ಬೆಳೆಸಲು ಮತ್ತು ಮಕ್ಕಳ ಸಾಹಿತ್ಯದ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಘಟಕ ಕಾರ್ಯನಿರ್ವಹಿಸಲಿದೆ  ಎಂದು ಗೌರವಧ್ಯಕ್ಷ ಡಾ.ಎಂ.ಧರ್ಮನಗೌಡ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!