https://youtu.be/NHc6OMSu0K4?si=SI_K4goOPEgwo6h2
HAMPI TIMES
ಹೊಸಪೇಟೆ: ಪಂಚಮಸಾಲಿ 2ಎ ಮೀಸಲಾತಿ ಮತ್ತು ಸಮಸ್ತ ಲಿಂಗಾಯತರಿಗೆ ಕೇಂದ್ರದಲ್ಲಿ ಒಬಿಸಿ ಸೇರ್ಪಡೆಗೆ ಒತ್ತಾಯಿಸಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಿ.4 ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹಮ್ಮಿಕೊಂಡಿರುವ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ವಿಜಯನಗರ ಜಿಲ್ಲೆಯ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿಜಯನಗರ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಪಾಟೀಲ್ ಕೋರಿದ್ದಾರೆ.
ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ನಡೆಯುತ್ತಿರುವ ಮೀಸಲಾತಿ ಹೋರಾಟದಲ್ಲಿ ನಾಡಿನ ಸಮಸ್ತ ವೀರಶೈವ ಲಿಂಗಾಯತ ಪಂಚಮಸಾಲಿಗರು ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಬೇಕು. ಸಮಾಜಭಾಂಧವರು ಸಂಘಟಿತರಾಗಿ ಮೀಸಲಾತಿ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಕ್ಕೆ ಸಮಾಜದ ಶಕ್ತಿಯನ್ನು ತೋರಿಸಬೇಕು. ಹೋರಾಟದಿಂದಲೆ ಸೌಲಭ್ಯ ಪಡೆಯಲು ಸಾಧ್ಯ ಎಂಬುದನ್ನು ಅರಿತು ಸಮಾಜದ ಸಮಾವೇಶಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಉದ್ಘಾಟನೆ: ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಶ್ರೀ ಸೊಮೇಶ್ವರ ತೇರಿನಮನೆ ಆವರಣ, ಹುಲಗೇರಿಬಣದಲ್ಲಿ ಬೆಳಿಗ್ಗೆ 10.30ಕ್ಕೆ ಸಮಾವೇಶ ಜರುಗಲಿದ್ದು, ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ನಿರಾಣಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮೊದಲ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮನ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ. ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಚನ್ನಮ್ಮನ ಮನೆ ಕಾರ್ಯಕ್ರಮ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಂಸದ ಸಂಗಣ್ಣ ಕರಡಿ ಮತ್ತು ರಾ.ವೀ.ಲಿಂ.ಪಂಚಮಸಾಲಿ ಸಂಘದ ರಾಜ್ಯಧ್ಯಕ್ಷ ಜಿ.ಪಿ.ಪಾಟೀಲ ಅವರು ಹರಮನೆ ಕಾರ್ಯಕ್ರಮ ಸ್ಮರಣ ಸಂಚಿಕೆ ಬಿಡುಗಡೆಗೊಲಿಸಲಿದ್ದಾರೆ. ಶಾಸಕರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಳಕಪ್ಪ ಜಿ.ಬಂಡಿ, ಮಾಜಿ ಶಾಸಕ ಗಂಗಣ್ಣ ಮಹಾಂತೇಶಶೆಟ್ಟರ, ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಶಾಸಕ ಅರುಣಕುಮಾರ ಪೂಜಾರ ಉಪಸ್ಥಿತರಿರಲಿದ್ದಾರೆ. ಲಕ್ಷ್ಮೇಶ್ವರ ತಾಲೂಕು ವೀ.ಲಿಂ.ಪಂಚಮಸಾಲಿ ಸಂಘ ತಾಲೂಕಧ್ಯಕ್ಷ ಮಂಜುನಾಥ ವೀ.ಮಾಗಡಿ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಗೌರವಧ್ಯಕ್ಷ ಬಾವಿಬೆಟ್ಟಪ್ಪ, ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಮಾಜಿ ಅಧ್ಯಕ್ಷ ಬಸವರಾಜ ದಿಂಡೂರ, ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ