December 14, 2024

Hampi times

Kannada News Portal from Vijayanagara

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

 

https://youtu.be/NHc6OMSu0K4?si=SI_K4goOPEgwo6h2

HAMPI TIMES
ಹೊಸಪೇಟೆ: ವಿಜಯನಗರ ಜಿಲ್ಲೆಯ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಂಗಿದುರ್ಗದ ಬಳಿ 2022 ಏಪ್ರಿಲ್ 28 ರಂದು ನಡೆದಿದ್ದ ದಾವಣಗೆರೆ ಮೂಲದ ಧನ್ಯಕುಮಾರ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಪರಮೇಶಿ(33)ಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಸೇರಿದಂತೆ ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿತ್ತು, ಪರಮೇಶಿ ಹಾಗೂ ಮತ್ತೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದರು. ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಲ್.ಶ್ರೀಹರಿಬಾಬು, ಹರಪನಹಳ್ಳಿ ಉಪವಿಭಾಗ ಡಿವೈಎಸ್ಪಿ ಹಾಲಮೂರ್ತಿರಾವ್ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ ಎಂ ಕಮ್ಮಾರ, ಪಿಎಸ್‌ಐ ಪ್ರಶಾಂತ, ಪೇದೆಗಳಾದ ರವಿ ದಾದಾಪುರ, ವಾಸುದೇವನಾಯ್ಕರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

 

 

ಜಾಹೀರಾತು
error: Content is protected !!