https://youtu.be/NHc6OMSu0K4?si=SI_K4goOPEgwo6h2
ಮಾನವನ ಏಳ್ಗೆಗಾಗಿ ಹಕ್ಕುಗಳ ಜಾಗೃತಿ | ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಹಂಪಿಟೈಮ್ಸ್ ಹೊಸಪೇಟೆ:
ಮಗು ಗರ್ಭಾವಸ್ಥೆಯಲ್ಲಿರುವವಾಗಲೆ ಜೀವಿಸುವ ಹಕ್ಕನ್ನು ಪಡೆದಿರುತ್ತದೆ. ಆ ಹಕ್ಕನ್ನು ಪೋಷಕರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಗರ್ಭಪಾತಕ್ಕೆ ಮುಂದಾದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಕಿಶನ್ ಬಿ.ಮಾಡಲಗಿ ಹೇಳಿದರು.
ತಾಲೂಕು ಕಾನೂನು ಸೇವಾಸಮಿತಿ, ಹೊಸಪೇಟೆ ವಕೀಲರ ಸಂಘ ಹಾಗೂ ಜವಳಿಸ್ ಪಿಯು.ಕಾಲೇಜ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಟಿಬಿಡ್ಯಾಂನಲ್ಲಿರುವ ಜವಳಿಸ್ ಪಿ.ಯು.ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಮಹಾಯುದ್ದಗಳು ನಡೆದ ಸಂದರ್ಭದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗಿದ್ದವು. ಮಾನವ ಹಕ್ಕುಗಳ ರಕ್ಷಣೆಗಾಗಿ 10 ಡಿಸೆಂಬರ್ 1948ರಿಂದ ವಿಶ್ವಸಂಸ್ಥೆ ಮಾನವಹಕ್ಕುಗಳ ದಿನಾಚರಣೆ ಆಚರಿಸುತ್ತಾ ಬಂದಿದ್ದು, ಜನರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ದಿನಾಚರಣೆ ಅಚರಿಸಲಾಗುತ್ತದೆ. ಮಾನವ ಹಕ್ಕುಗಳಲ್ಲಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳು ಹಾಗೂ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಮುಖ್ಯವಾಗಿವೆ ಎಂದರು.
ಜವಳೀಸ್ ಪಿಯು ಕಾಲೇಜಿನ ಪ್ರಾಚಾರ್ಯ ಲೇಪಾಕ್ಷ ಎಸ್.ಜವಳಿ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲೆ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯ. ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳಲ್ಲಿ ವಿಜ್ಞಾನ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಭಾಗವಹಿಸುವ ಹಕ್ಕು, ಶಿಕ್ಷಣ, ರಾಜಕೀಯ, ಸ್ವಾತಂತ್ರö್ಯ, ಆಸ್ತಿ, ಅಭಿವ್ಯಕ್ತಿ ಸ್ವಾತಂತ್ರö್ಯ, ಕೆಲಸ ಮಾಡುವ ಹಕ್ಕು ಸೇರಿದಂತೆ ಇತರ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರು ನಿಗಾವಹಿಸಬೇಕು ಎಂದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ ಮಾತನಾಡಿದರು. ಸಿವಿಲ್ ನ್ಯಾಯಾಧೀಶರಾದ ತೃಪ್ತಿಧರಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ವೀರನಗೌಡ, ಪ್ಯಾನಲ್ ವಕೀಲರಾದ ಕೆ.ರಾಮಪ್ಪ ಉಪಸ್ಥಿತರಿದ್ದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ