November 7, 2024

Hampi times

Kannada News Portal from Vijayanagara

 ಇನ್ನೆಷ್ಟು ದಿನ ಮಾಂಡೋಸ್ ಶೀತ ಗಾಳಿ ? ಆರೋಗ್ಯ ಇಲಾಖೆ ಏನು ಹೇಳಿದೆ ನೋಡಿ

 

https://youtu.be/NHc6OMSu0K4?si=SI_K4goOPEgwo6h2

 

 

ಆರೋಗ್ಯ ಸುರಕ್ಷತೆಗೆ ಆರೋಗ್ಯ ಇಲಾಖೆಯ ಸಲಹೆಗಳು

ಹಂಪಿಟೈಮ್ಸ್ ಹೊಸಪೇಟೆ:
ಮಾಂಡೋಸ್ ಚಂಡಮಾರುತದಿಂದ ರಾಜ್ಯದ ಅನೇಕ ಜಿಲ್ಲೆಗಳು ಮಳೆ, ಶೀತ, ಗಾಳಿ ಹಾಗೂ ಅತಿ ಕಡಿಮೆ ತಾಪಮಾನ ವರದಿಯಾಗಿದೆ. ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದ್ದು, ಮುಂದಿನ ವಾರದಲ್ಲಿ ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಬೆನ್ನಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಆರೋಗ್ಯ ಸುರಕ್ಷತೆಗೆ ಕೆಲ ಸಲಹೆಗಳನ್ನು ನೀಡಿದೆ. ಮುಂಬರುವ ಚಳಿಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು(ನವಜಾತ ಶಿಶುಗಳು ಸೇರಿದಂತೆ) ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕೆಳಗಿನ ಸಲಹೆಗಳನ್ನು ಪಾಲಿಸಲು ಸೂಚಿಸಿದೆ.

ಮಾಡಬೇಕಾದ್ದು: ಯಾವಾಗಲೂ ಬೆಚ್ಚಗಿನ ನೀರು/ಸೂಪ್‌ಗಳನ್ನು ಕುಡಿಯುವುದು | ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು | ಯಾವಾಗಲೂ ಸ್ವೆಟರ್, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ | ಸ್ನಾನಕ್ಕೆ ಬಿಸಿ ನೀರು/ಬೆಚ್ಚಗಿನ ನೀರನ್ನು ಉಪಯೋಗಿಸುವುದು | ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ | ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಕಟ್ಟಿಕೊಳ್ಳಿ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು | ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವುದರಿಂದ ದೂರವಿರಬೇಕು | ಮೊಣಕೈ ಒಳಗೆ ಸೀನುವುದು/ಕೆಮ್ಮುವಾಗ ಕರವಸ್ತçಗಳನ್ನು ಬಳಸುವುದು | ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯುವುದು | ಜ್ವರ / ಫ್ಲೂನ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು. ಸ್ವಯಂವೈದ್ಯ ಪದ್ದತಿಗಳನ್ನು ಅನುಸರಿಸಬಾರದು.

ಮಾಡಬಾರದ್ದು: ತಣ್ಣಗಿನ ಪಾನೀಯಗಳು, ಐಸ್‌ಕ್ರೀಂಗಳನ್ನು ಸೇವಿಸಬಾರದು | ರೆಫ್ರಿಜಿರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು | ವಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು | ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿಭಂಧಿಸಿ ( ವಿಶೇಷವಾಗಿ ಗಿರಿಧಾಮಗಳೀಗೆ ವಾರಂತ್ಯದ ಪ್ರವಾಸ ಹೋಗುವುದು ಇತ್ಯಾದಿ) | ಮಸಲಾಯುಕ್ತ ಪದಾರ್ಥಗಳು/ಜಂಕ್ ಫುಡ್‌ಗಳನ್ನು ವರ್ಜಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಆಯುಕ್ತರಾದ ರಂದೀಪ್ ಡಿ ಪ್ರಕಟೆಯಲ್ಲಿ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!