December 14, 2024

Hampi times

Kannada News Portal from Vijayanagara

ಡಿ.18 ಬಿಡಿಸಿಸಿ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮ

 

https://youtu.be/NHc6OMSu0K4?si=SI_K4goOPEgwo6h2

ಶತಕದ ಸಂಭ್ರಮದಲ್ಲಿ ಬಿಡಿಸಿಸಿ ಬ್ಯಾಂಕ್

ಹಂಪಿಟೈಮ್ಸ್ ಹೊಸಪೇಟೆ:

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮ ಪ್ರವಾಸೋಧ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಡಿ.18 ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ|| ಪುನೀತ್ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಉದ್ಘಾಟಿಸಲಿದ್ದಾರೆ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.

ಬೃಹತ್ ಮತ್ತು ಮಧ್ಯಮ ನೀರವಾರಿ ಸಚಿವ ಗೋವಿಂದ ಎಂ.ಕಾರಜೋಳ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಲಿದ್ದಾರೆ. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶತಮಾನೋತ್ಸವ ಆಡಳಿತ ಭವನ ಹಾಗೂ ಮೂರು ಶಾಖೆಗಳ ಕಟ್ಟಡ ಶಂಕು ಸ್ಥಾಪನೆ ಮತ್ತು ಕಂಪ್ಲಿ ಕೆ.ಎಸ್.ಎಫ್.ಶಾಖೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.

ಪಶು ಸಂಗೋಪನಾ ಸಚಿವ ಪ್ರಭು ಬಿ.ಚೌವ್ಹಾಣ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕಾರ್ಮಿಕ ಸಚಿವ ಅರಬೈಲ್ ಹೆಬ್ಬಾರ್ ಶಿವರಾಮ್ ಶತಮಾನೋತ್ಸವ ಠೇವಣಿ ಸರ್ಟಿಫಿಕೇಟ್ ಬಿಡುಗಡೆ ಮಾಡಲಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ತ್ನ ಪುರಷ್ಕೃತರಿಗೆ ಸನ್ಮಾನ ಮಾಡಲಿದ್ದಾರೆ. ರೇಷ್ಮೇ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಬ್ಯಾಂಕಿನ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ, ಪ್ರೌಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಶಿಕ್ಷಕರ ಒಕ್ಕೂಟಗಳಿಗೆ ಸನ್ಮಾನ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಬಸಪ್ಪ ಆಚಾರ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಸನ್ಮಾನ, ತೋಟಗಾರಿಕೆ ಮತ್ತು ಯೋಜನೆ ಮತ್ತು ಸಾಂಖ್ಯಿಕ  ಇಲಾಖೆ ಸಚಿವ ಎನ್.ಮುನಿರತ್ನ ಬಿಡಿಸಿಸಿ ಬ್ಯಾಂಕ್ ನೌಕರರ ಕ್ರಿಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವಿಜೇತರಿಗೆ ಪ್ರಶಸ್ತಿ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಶಾಸಕರು, ವಿವಿಧ ಸಹಕಾರಿ ಬ್ಯಾಂಕ್ ಗಳ ಅಧ್ಯಕ್ಷರು, ನಗರಸಭೆ ಅಧ್ಯಕ್ಷೆ ಬಿ.ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ ಜೀರೆ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.

ಅಂದು ಸಂಜೆ 6.30ಕ್ಕೆ ಸಂಜಿತ್ ಹೆಗ್ಡೆ ಮತ್ತು ಕಲಾ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

 

 

ಜಾಹೀರಾತು
error: Content is protected !!