https://youtu.be/NHc6OMSu0K4?si=SI_K4goOPEgwo6h2
ವಿಶ್ವಕರ್ಮ ಅಮರ ಶಿಲ್ಪಿ ಜಕಾಣಾಚಾರಿ ಸಂಸ್ಮಾರಣಾ ದಿನಾಚರಣೆ ಪೂರ್ವಭಾವಿ ಸಭೆ
ಹಂಪಿ ಟೈಮ್ಸ್ ಹೊಸಪೇಟೆ:
ವಿಶ್ವಕರ್ಮ ಅಮರ ಶಿಲ್ಪಿ ಜಕಾಣಾಚಾರಿ ಸಂಸ್ಮಾರಣಾ ದಿನಾಚರಣೆಯನ್ನು ಜ.1ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹೇಳಿದರು.
ಹೊಸಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ವಿಶ್ವಕರ್ಮ ಅಮರ ಶಿಲ್ಪಿ ಜಕಾಣಾಚಾರಿ ಸಂಸ್ಮಾರಣಾ ದಿನಾಚರಣೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವಕರ್ಮ ಅಮರ ಶಿಲ್ಪಿ ಜಕಾಣಾಚಾರಿ ಸಂಸ್ಮಾರಣಾ ದಿನಾಚರಣೆಯ ಅಂಗವಾಗಿ ಮೆರವಣಿಗೆಯು ಮಧ್ಯಾಹ್ನ 2ಗಂಟೆಗೆ ಬಳ್ಳಾರಿ ರಸ್ತೆ ಕಾಳಮ್ಮ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಆರಂಭಗೊಂಡು ಡಾ.ಪುನೀತ್‍ರಾಜಕುಮಾರ್ ಸರ್ಕಲ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಮುಖಾಂತರ ಹಾದುಹೋಗಿ ನಗರದ ಮುನ್ಸಿಪಲ್ ಮೈದಾನದಲ್ಲಿ ಕೊನೆಗೊಳ್ಳಲಿದೆ. ನಂತರ ವೇದಿಕೆ ಕಾರ್ಯಕ್ರಮ ಸಂಜೆ 4ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಪಂಚ ಕಸುಬುಗಳಲ್ಲಿ ಸಾಧನೆಗೈದವರಿಗೆ ಸನ್ಮಾಸಿಸಲಾಗುವುದು ಹಾಗೂ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರುಗಳು ತಮ್ಮ ಬೇಡಿಕೆಗಳನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಲುಬುರಗಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಹೆಚ್.ಚನ್ನೂರ್, ಪುರಸಭೆ ಆಯುಕ್ತ ಮನೋಹರ್ ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣನವರ್, ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮಹ್ತಾ, ವಿಶ್ವಕರ್ಮ ಸಮಾಜದ ಮುಖಂಡರು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಇದ್ದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ