https://youtu.be/NHc6OMSu0K4?si=SI_K4goOPEgwo6h2
ವಿಜಯನಗರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅಹವಾಲು ಸ್ವೀಕಾರ
ಹಂಪಿ ಟೈಮ್ಸ್ ಹೊಸಪೇಟೆ:
ವಿಜಯನಗರ ಲೋಕಾಯುಕ್ತ ವಿಭಾಗದ ವತಿಯಿಂದ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಮಾಡದೇ ಬಾಕಿ ಇಟ್ಟಿರುವ ಕುಂದು-ಕೊರತೆಗಳ ಅಹವಾಲು ಸ್ವೀಕಾರವನ್ನು ಡಿ.20ರಿಂದ ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಅಯ್ಯನಗೌಡ ಪಾಟೀಲ್ ತಿಳಿಸಿದ್ದಾರೆ.
ಡಿ.20ರಂದು ಹೊಸಪೇಟೆ ತಾಲೂಕಿನ ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ,
ಡಿ.21ರಂದು ಹಗರಿಬೊಮ್ಮನಹಳ್ಳಿ ತಾಲೂಕಿನ ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ,
ಡಿ.22ರಂದು ಹರಪನಹಳ್ಳಿ ತಾಲೂಕಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ,
ಡಿ.27ರಂದು ಹೂವಿನಹಡಗಲಿ ತಾಲೂಕಿನ ಸರ್ಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಸಾರ್ವಜನಿಕರ ಕುಂದು-ಕೊರೆತೆಗಳ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ