October 14, 2024

Hampi times

Kannada News Portal from Vijayanagara

ರಾಷ್ಟ್ರೋತ್ಥಾನ ಸಂಸ್ಥೆಗೆ ಸುವರ್ಣ ಸಂಭ್ರಮ

 

https://youtu.be/NHc6OMSu0K4?si=SI_K4goOPEgwo6h2

 

 

ಡಿ.25 ರಂದು ರಾಷ್ಟ್ರೋತ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವ

ಹಂಪಿಟೈಮ್ಸ್ ಹಗರಿಬೊಮ್ಮನಹಳ್ಳಿ:
ಹಬೊಹಳ್ಳಿಯಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸ್ಥಾಪಿಸಿ 50 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಡಿ.25 ರಂದು ಸುವರ್ಣ ಮಹೋತ್ಸವ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಬಿ.ಬಸವನಗೌಡ ಹೇಳಿದರು.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ನಂದಿಪುರ ಕ್ಷೇತ್ರದ ಡಾ.ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್‌ನ ಕಾರ್ಯದರ್ಶಿ ನಾ.ದಿನೇಶ ಹೆಗ್ಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಎಸ್‌ಕೆ ವಿವಿಯ ಸಿಂಡಿಕೇಟ್ ಸದಸ್ಯ, ಸಂಸ್ಕಾರ ಭಾರತಿಯ ಅಖಿಲ ಭಾರತ ಪ್ರಂಬಧಕಾರಿಣಿ ಸದಸ್ಯೆ ಪದ್ಮಾ ವಿಠಲ್, ಮುಖ್ಯ ವಕ್ತಾರರಾಗಿ ಪೂತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಆಗಮಿಸುತ್ತಿದ್ದಾರೆ. ಹಿರಿಯ ಸಾಹಿತಿ ಡಾಗುರುಮೂರ್ತಿ ಪೆಂಡಕೂರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವಿದ್ಯಾಕೇಂದ್ರದ ಆವರಣದಲ್ಲಿ ಡಿ.24, 25 ರಂದು ರಾಷ್ಟ್ರೋತ್ಥಾನ ಸಾಹಿತ್ಯದಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ. ವಿಶೇಷ ರಿಯಾಯ್ತಿ ದರದಲ್ಲಿ ಸಾಹಿತ್ಯಿಕ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು. ರಾಷ್ಟ್ರೋತ್ಥಾನ ಶಾಲೆಯ ಸುಮಾರು 50 ಬ್ಯಾಚಿನ ಎಲ್ಲಾ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ನಡೆಸಲಾಗುವುದು. ಶಾಲೆಯ ಎಲ್ಲಾ ಹಳೆಯ ವಿದ್ಯಾರ್ಥಿಗಳು ಸುವರ್ಣ ಸಂಭ್ರಮದಲ್ಲಿ ಭಾಗಿಯಾಗುವಂತೆ ಕರೆ ನೀಡಿದರು.

 

 

ಜಾಹೀರಾತು
error: Content is protected !!