https://youtu.be/NHc6OMSu0K4?si=SI_K4goOPEgwo6h2
ಹಂಪಿಟೈಮ್ಸ್ ಹೊಸಪೇಟೆ:
ವಿಜಯನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ರವೀಂದ್ರನಾಥ, ಪ್ರಧಾನ ಕಾರ್ಯದರ್ಶಿಯಾಗಿ ಕೂಡ್ಲಿಗಿಯ ಎನ್.ಎಂ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಶ್ರೀ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದಲ್ಲಿ ಭಾನುವಾರ ಹೊಸಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೌಭಾಗ್ಯ ಲಕ್ಷ್ಮೀ ಅವರು ಆಯೋಜಿಸಿದ್ದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸರ್ವಾನುಮತದಿಂದ ಜರುಗಿತು.
ಸಭೆಯಲ್ಲಿ ರಾಜ್ಯ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಶ್ರೀಶೈಲ ಪಟ್ಟಣಶೆಟ್ಟಿ ಅವರು ನೂತನ ಅಧ್ಯಕ್ಷರ ನಿಯೋಜನೆಯ ವೀಕ್ಷಕರಾಗಿದ್ದರು. ಬಳ್ಳಾರಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಬಿ.ಸಿದ್ದಲಿಂಗಪ್ಪ ನೂತನ ಅಧ್ಯಕ್ಷರ ಆಯ್ಕೆ ಪ್ರಸ್ತಾವನೆ ಮಂಡಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶರಣ ಸಾಹಿತ್ಯ ಪರಿಷತ್ತಿನ ೫೦ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ