March 15, 2025

Hampi times

Kannada News Portal from Vijayanagara

ಖಾಸಗಿ ಕಾಲೇಜು-ಕೈಗಾರಿಕೆಗಳ ಸಹಯೋಗದಲ್ಲಿ ಪಿ.ಹೆಚ್.ಡಿ ಸಂಶೋಧನೆ ಅವಕಾಶಕ್ಕೆ ಚಿಂತನೆ : ಸಚಿವ ಡಾ.ಅಶ್ವಥ್ ನಾರಾಯಣ ಸಿ.ಎನ್.

 

https://youtu.be/NHc6OMSu0K4?si=SI_K4goOPEgwo6h2

 

HAMPI TIMES

ಬೆಳಗಾವಿ ಸುವರ್ಣಸೌಧ:  ವಿಶ್ವವಿದ್ಯಾಲಯಗಳ ಸಂಶೋಧನೆಯಲ್ಲಿ ನಾವೀನ್ಯತೆ ತರಲು ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಖಾಸಗಿ ಕಾಲೇಜು ಹಾಗೂ ಕೈಗಾರಿಕೆಗಳ ಸಹಯೋಗದಲ್ಲಿ ಪಿ.ಹೆಚ್.ಡಿ ಸಂಶೋಧನೆ ಕೈಗೊಳ್ಳಲು ಅವಕಾಶ ನೀಡಲು ಚಿಂತಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ.ಸಿ.ಎನ್. ಹೇಳಿದರು.

ಸೋಮವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಪಾಲ್ಗೊಂಡ ಅವರು ಶಾಸಕರಾದ ಮಧು.ಜಿ.ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.  ಪಿ.ಹೆಚ್.ಡಿ ನಿಯಮಾವಳಿನ್ವಯ ಸಹಾಯಕ ಪ್ರಾಧ್ಯಾಪಕರು 04, ಸಹ ಪ್ರಾಧ್ಯಾಪಕರು 06 ಮತ್ತು ಪ್ರಾಧ್ಯಾಪಕರು 08 ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬಹುದು. ಆದರೆ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಮಾರ್ಗದರ್ಶಕರ ಕೊರತೆ ಹೆಚ್ಚಾಗಿದೆ. ಇದನ್ನು ಸರಿದೂಗಿಸಲು ಹಾಗೂ ನೂತನ ವಿಷಯಗಳನ್ನು ಆಧರಿಸಿ ಸಂಶೋಧನೆ ನಡೆಸಲು ಖಾಸಗಿ ಕಾಲೇಜುಗಳ ಪ್ರಾಧ್ಯಾಪಕರಿಗೂ ಪಿ.ಹೆಚ್.ಡಿ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕಾಗಿದೆ. ಕೈಗಾರಿಕೆಗಳ ಸಂಶೋಧನ ವಿಭಾಗಗಳಲ್ಲಿ ಪಿ.ಹೆಚ್.ಡಿ ಕೈಗೊಳ್ಳುವುದರಿಂದ ಹೆಚ್ಚಿನ ಲಾಭವಾಗಲಿದೆ. ಹೊಸ ಕೋರ್ಸುಗಳನ್ನು ಆರಂಭಿಸಲಾಗುವುದು ಎಂದರು.

ಶಾಸಕ ಮಧು.ಜಿ.ಮಾದೇಗೌಡ ಮಾತನಾಡಿ, ಪಿ.ಹೆಚ್.ಡಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ದೊರಕದಿದ್ದರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವಕಾಶ ಕಲ್ಪಿಸಬೇಕು ಎಂದರು.

 

 

ಜಾಹೀರಾತು
error: Content is protected !!