December 5, 2024

Hampi times

Kannada News Portal from Vijayanagara

1219 ಕೇಂದ್ರಗಳಲ್ಲಿ ಮತದಾರ ಪಟ್ಟಿ ಪ್ರಕಟ, ವೆಬ್‍ಸೈಟ್‍ನಲ್ಲಿ ಪರಿಶೀಲನೆಗೆ ಅವಕಾಶ : ಜಿಲ್ಲಾಧಿಕಾರಿ ಟಿ.ವೆಂಕಟೇಶ

 

https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ:

ಚುನಾವಣಾ ಆಯೋಗ ನಿರ್ದೇಶನದ ಮೇರೆಗೆ ವಿಜಯನಗರ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಹಾಗೂ ನೋಂದಣಿಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ 1219 ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಿಮ ಮತದಾರ ಪಟ್ಟಿ ಪ್ರಚಾರ ಪಡಿಸುವ ಕುರಿತು ಜಿಲ್ಲೆಯ ರಾಜಕೀಯ ಪಕ್ಷಗಳ ಜೊತೆ ಜರುಗಿದ ಸಭೆಯಲ್ಲಿ ಮಾತನಾಡಿದರು. ವಿಜಯನಗರ ಜಿಲೆಯಲ್ಲಿ 2023ರ ಸಂಕ್ಷಿಪ್ತ ಮತದಾರ  ಪರಿಷ್ಕರಣೆಯ ಅಂತಿಮ ಮತದಾರ ಪಟ್ಟಿಯನ್ನು ಪ್ರಕಟಿಸಲಾಗಿದೆ.  ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 88-ಹಡಗಲಿ, 89-ಹಗರಿಬೊಮ್ಮನಹಳ್ಳಿ, 90-ವಿಜಯನಗರ, 96-ಕೂಡ್ಲಿಗಿ, 104-ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ, ಹೊಸಪೇಟೆ, ಹರಪನಹಳ್ಳಿಯ ಮತದಾರ ನೊಂದಣಾಧಿಕಾರಿ ಕಚೇರಿ ಮತ್ತು ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಸಹಾಯಕ ಮತದಾರ ನೊಂದಣಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಒಟ್ಟು 1219 ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಎಲ್ಲಾ ರಾಜಕೀಯ ಪಕ್ಷದ ಮುಖಂಡರಿಗೆ ತಮ್ಮ ವ್ಯಾಪ್ತಿಯ ಎಲ್ಲಾ ವಿಧಾನ ಸಭಾ ಕ್ಷೇತ್ರದ ಮತದಾರರು ತಮ್ಮ ಹೆಸರು ಮತ್ತು ಕುಟುಂಬದ ಸದಸ್ಯರ ಹೆಸರು ಮತದಾರ ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕು. ಜಿಲ್ಲಾ ವೆಬ್‍ಸೈಟ್ vijayanagar.nic.in ಹಾಗೂ ಆಯೋಗದ ಪೋರ್ಟಲ್‍ನಲ್ಲಿಯೂ ಸಹ ಮತದಾರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೆಬ್‍ಸೈಟ್‍ನಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡಿ ಖಚಿತಪಡಿಸಿಕೊಳ್ಳಬಹುದಾಗಿದೆ. ಅಂತಿಮ ಮತದಾರ ಪಟ್ಟಿ ಪ್ರಕಟಣೆ ನಂತರ ಯಾವುದೇ ಮತದಾರರ ನೊಂದಣಿ ಮಾಡಲು ಸಾಧ್ಯವಾಗದೇ ಇದ್ದಲ್ಲಿ ಆಯೋಗ ವೆಬ್‍ಸೈಟ್‍ನಲ್ಲಿ ನಿರಂತರ ನೊಂದಣಿ ಪ್ರಕ್ರಿಯೆಯಲ್ಲಿ ತಮ್ಮ ಹೆಸರು ಮತದಾರ ಪಟ್ಟಿಯನ್ನು ಸೇರ್ಪಡೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!