November 7, 2024

Hampi times

Kannada News Portal from Vijayanagara

ಜ.20 ರಂದು ಬೆಂಗಳೂರಿನಲ್ಲಿ ಹಂಪಿ ಉತ್ಸವದ ಲೋಗೋ ಬಿಡುಗಡೆ: ಸಚಿವೆ ಶಶಿಕಲಾ ಅ ಜೊಲ್ಲೆ

 

https://youtu.be/NHc6OMSu0K4?si=SI_K4goOPEgwo6h2

 

 

ಹಂಪಿ ಉತ್ಸವದ ಸಿದ್ದತೆಗಳ ಪರಿಶೀಲನೆ

ಹಂಪಿಟೈಮ್ಸ್ ಹೊಸಪೇಟೆ :

ಜನವರಿ 27 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದ ಲೋಗೋವನ್ನ ಬಿಡಗಡೆಗೊಳಿಸಲಾಗುವುದು ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ  ಶಶಿಕಲಾ ಅ ಜೊಲ್ಲೆ ತಿಳಿಸಿದರು.

ಇಂದು ಅನಾರೋಗ್ಯದ ನಡುವೆಯೂ ವಿಡಿಯೋ ಕಾನ್ಪರೆನ್ಸ್‌ ಮೂಲಕ ಹಂಪಿ ಉತ್ಸವದ ಪೂರ್ವ ಸಿದ್ದತೆಗಳ ಸಭೆಯನ್ನು ನಡೆಸಿದ ಉಸ್ತುವಾರಿ ಸಚಿವರು ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಹಂಪಿ ಉತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ. ದಸರಾ ನಂತರ ಅತಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಉತ್ಸವವಾಗಿದೆ. ಈ ಉತ್ಸವಕ್ಕೆ ಜಿಲ್ಲಾಡಳಿತ ಸಿದ್ದತೆಗಳನ್ನು ಚುರುಕುಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಲಕ್ಷಾಂತರ ಜನರನ್ನ ಸೆಳೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು. ಈ ಹಿನ್ನಲೆಯಲ್ಲಿ ಶುದ್ದಕುಡಿಯುವ ನೀರು, ಆಹಾರ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಗಣ್ಯವ್ಯಕ್ತಿಗಳು ಹಾಗೂ ಕಲಾವಿದರ ಪಟ್ಟಿಯನ್ನು ಶೀಘ್ರವಾಗಿ ಅಂತಿಮಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಹಂಪಿ ಉತ್ಸವದ ಲೋಗೋ ಸಿದ್ದಗೊಂಡಿದ್ದು, ಈ ಲೋಗೋವನ್ನ ಸನ್ಮಾನ್ಯ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ. ವೆಂಕಟೇಶ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್‌ ನಾರಾಯಣ್‌ ರಾವ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

ಜಾಹೀರಾತು
error: Content is protected !!