December 14, 2024

Hampi times

Kannada News Portal from Vijayanagara

ಮಾ.1ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರು, ಅಸಹಕಾರ ಚಳುವಳಿಗೆ ಕರೆ: ಜಿ.ಮಲ್ಲಿಕಾರ್ಜುನ ಗೌಡ

 

https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ:

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾ.1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಮಲ್ಲಿಕಾರ್ಜುನ ಗೌಡ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಇಲ್ಲದಿರುವುದು ನೌಕರರಲ್ಲಿ ನಿರಾಸೆ ಮೂಡಿಸಿದೆ. ಸರ್ಕಾರಕ್ಕೆ ಈಗಾಗಲೇ 7ನೇ ವೇತನ ಆಯೋಗಕ್ಕೆ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿ ಸಲ್ಲಿಸಲಾಗಿದೆ. ಕಾಲಕಾಲಕ್ಕೆ ತಕ್ಕಂತೆ ನೌಕರರು ವೇತನ ಹಾಗೂ ಭತ್ಯೆಗಳ ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ನಿರ್ವಹಣೆ ಹೈರಾಣಾಗಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು ನಿರ್ಲ್ಯಕ್ಷಿಸಿರುವ ಸರ್ಕಾರಕ್ಕೆ ಅಸಹಕಾರ ಚಳುವಳಿ ಮೂಲಕ ಪ್ರತಿಭಟನೆ ಆರಂಭಿಸುತ್ತಿದ್ದೇವೆ. 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40 ಫಿಟ್ಮೆಂಟ್ ಸೌಲಭ್ಯವನ್ನು 1 ಜುಲೈ 2022 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು.

ಸಂಧ್ಯಾಕಾಲದ ಬದುಕು ಕಷ್ಟಕರವಾಗಿರುವುದರಿಂದ ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರಬೇಕು. ಈಗಾಗಲೇ ಪಂಚಾಜ್, ರಾಜಸ್ಥಾನ, ಚತ್ತೀಸ್ ಘಡ, ಜಾರ್ಖಾಂಡ, ಹಿಮಾಚಲ ಪ್ರದೇಶಗಳಲ್ಲಿ ಹಳೇ ಪಿಂಚಣಿಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಎನ್ ಪಿ ಎಸ್ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ ಮಾತನಾಡಿ, ಸರ್ಕಾರ  ಕೂಡಲೇ ನೌಕರರ ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ನೌಕರರು ಮಾ.1 ರಿಂದ ಸರ್ಕಾರಿ ಕಚೇರಿ ಕೆಲಸಕ್ಕೆ ಗೈರಾಗುತ್ತಾರೆ. ಯಾವುದೇ ಬಹಿರಂಗ ವೇದಿಕೆಗಳಡಿ ಪ್ರತಿಭಟನೆ ಮಾಡದೆ, ಸರ್ಕಾರದ ವಿರುದ್ಧ ಘೋಷಣೆಯೂ ಕೂಗದೆ ಅಸಹಕಾರ ಚಳುವಳಿ ನಡೆಸುತ್ತೇವೆ  ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಜೀವಣ್ಣ, ಖಜಾಂಚಿ ರಾಘವೇಂದ್ರ ಹೆಡಿಯಾಳ, ರಾಜ್ಯ ಪರಿಷತ್ ಸದಸ್ಯ ಎಸ್ ಬಸವರಾಜ, ಉಪಾಧ್ಯಕ್ಷರುಗಳಾದ ನಾಗಭೂಷಣ ಶೆಟ್ರು, ಲತಾ, ಡಾ|| ಮುನಿವಾಸುದೇವ ರೆಡ್ಡಿ, ಕೃಷ್ಣ ದುಂಡಪ್ಪ, ಹನುಮಂತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ, ಬಸವರಾಜ, ಕಾರ್ಯದರ್ಶಿ ಮಲ್ಲಯ್ಯ, ಬಡ್ತಿ ಮುಖ್ಯಗುರುಗಳ ಸಂಘದ ಅಧ್ಯಕ್ಷೆ ಶ್ರೀಮತಿ ರೇಣುಕಾ ಟಪಾಲ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕುಮಾರಸ್ವಾಮಿ, ಅಧ್ಯಕ್ಷ ತಿಮ್ಮಪ್ಪ, ತಾಲೂಕು ಕಾರ್ಯದರ್ಶಿ ಶೇಖರ್ ಗಿರಡ್ಡಿ, ಸುಧಾದೇವಿ, ನೀಲಮ್ಮ ಗಚ್ಚಿನಮನಿ, ಡಿ ಗ್ರೂಪ್ ಸಂಘದ ಜಿಲ್ಲಾಧ್ಯಕ್ಷರ ಅಜಯ್, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಹೆಚ್ ಎಂ ಗುರುಬಸರಾಜ ಮತ್ತಿತರರು ಹಾಜರಿದ್ದರು

 

 

ಜಾಹೀರಾತು
error: Content is protected !!