December 5, 2024

Hampi times

Kannada News Portal from Vijayanagara

ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ; ಅರ್ಜಿ ಆಹ್ವಾನ

 

https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್  ಹೊಸಪೇಟೆ:

ಹಳದಿ ಬೋರ್ಡ್ ಹೊಂದಿದ ಟ್ಯಾಕ್ಸಿ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಈಶ್ವರ್ ಚವ್ಹಾಣ್ ಅವರು ತಿಳಿಸಿದ್ದಾರೆ.

ವಿದ್ಯಾನಿಧಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಕೇಂದ್ರದ ಮೂಲಕ ಸೇವಾ ಸಿಂಧು ವೆಬ್ ಪೋರ್ಟಲ್‌ನಲ್ಲಿ ಪೊಷಕರ ಚಾಲನಾ ಅನುಜ್ಞಾ  ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ವಿದ್ಯಾರ್ಥಿಯ ಆಧಾರ್ ಸಂಖ್ಯೆ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!