December 14, 2024

Hampi times

Kannada News Portal from Vijayanagara

ಮಹಿಳೆಯರ ಸ್ವಾವಲಂಬಿ ಬದುಕಿಗೆ ತಂತ್ರಜ್ಞಾನ ಕೌಶಲ್ಯ ಸಹಕಾರಿ : ಎಡಿಸಿ ಅನುರಾಧ

 

https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ :

ಆಧುನೀಕತೆಗೆ ತಕ್ಕಂತೆ ಮಹಿಳೆ ಯರು ಶಿಕ್ಷಣದ ಜೊತೆಗೆ ತಂತ್ರಜ್ಞಾನ ಕೌಶಲ್ಯವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾವಲಂಬಿಗಳಾಗಿ ಬದಕುಬಹುದು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ.ಜಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಹಿಳಾ ಆಯೋಗ ಕಾನೂನು ಸೇವಾ ಸಮಿತಿ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ದೇಶವನ್ನು ಆಳುವುದರ ಜೊತೆಗೆ ದೇಶ ರಕ್ಷಣೆಗಾಗಿ ಯುದ್ದ ಮಾಡಿರುವುದು ಇತಿಹಾಸ ಹೇಳುತ್ತದೆ.  ಸರ್ವ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ. ಮಹಿಳೆ ಶಿಕ್ಷಣ ಕಲಿತರೆ ತನ್ನ ಮಕ್ಕಳ ಭವಿಷ್ಯವನ್ನು ಮತ್ತಷ್ಟು ಉಜ್ವಲಗೊಳಿಸಲು ಸಾಧ್ಯ. ಶೇ.33 ರಷ್ಟು ಮಾತ್ರ ಮಹಿಳೆಯರು ಮೊಬೈಲ್  ಮತ್ತು ತಂತ್ರಜ್ಞಾನ ಬಳಸುತ್ತಿದ್ದಾರೆ. ಲಿಂಗ ಸಮಾನತೆ-ಸಮಾನ ಅವಕಾಶಗಳು ಎಂಬ ಘೋಷವಾಕ್ಯ ಬಿಡುಗಡೆ ಮಾಡಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಂಗಸ್ವಾಮಿ ಅವರು ಮಾತನಾಡಿ, ಮಹಿಳೆಯರು ಸಾಮಾಜಿಕ, ಅರ್ಥಿಕ, ರಾಜಕೀಯ ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅದರಿಂದ ಸ್ಪೂರ್ತಿ ಪಡೆಯಬೇಕು. 1908 ಅಮೇರಿಕಾದಲ್ಲಿ ಮಹಿಳಾ ಸಮಾನತೆಗೆ ಕೂಗು ಆರಂಭವಾಯಿತು, 1909ರಲ್ಲಿ ಅದು ಚಳುವಳಿಯಾಗಿ ಮಾರ್ಪಟ್ಟು ಜಾಗತಿಕವಾಗಿ ಮನ್ನಣೆ ಪಡೆಯಿತು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವ ಆರೊಗ್ಯ ಸಂಸ್ಥೆಯ ಡಾ.ಹಂಸವೇಣಿ ಅವರು ಮಹಿಳೆಯರು ಆರೋಗ್ಯದ ಮೇಲೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಂತರ ಹಿರಿಯ ವಕೀಲರಾದ ಶ್ವೇತಾಂಬರಿ, ಸ್ಮಿತಾ ಭರಾಡೆ, ಹಾಗೂ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ಮಾನಸ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ 35 ವರ್ಷಗಳ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಜಾನಪದ ಗೀತೆ ಹಾಡುವ ಮೂಲಕ ಗಮನಸೆಳೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಅಶೋಕ್ ತೋಟದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರನಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಟಿ.ಭೋಗೇಶ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಹಿಳೆಯರು ಇದ್ದರು.

 

 

ಜಾಹೀರಾತು
error: Content is protected !!