https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ :
2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ 10 ತಿಂಗಳ ತೋಟಗಾರಿಕೆ ತರಬೇತಿ ಪಡೆಯಲು ಅರ್ಹ ರೈತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಅವರು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ.2 ರಿಂದ 2024ರ ಫೆ.29ರವರೆಗೆ 10 ತಿಂಗಳ ಕಾಲ ಬಳ್ಳಾರಿ, ವಿಜಯನಗರ ಜಿಲ್ಲಾ ಭಾಗದ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 18-33 ವರ್ಷ, ಇತರರು 18-30 ವರ್ಷ ಹಾಗೂ ಮಾಜಿ ಸೈನಿಕರು 33-65 ವರ್ಷ ವಯೋಮಿತಿ ಹೊಂದಿರಬೇಕು. ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿ, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿಯನ್ನು ಮಾ.11 ರಿಂದ ಏ.4ರವರೆಗೆ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ಕಚೇರಿಯಲ್ಲಿ ಅಥವಾ ಇಲಾಖಾ ವೆಬ್‌ಸೈಟ್ www.horticultur.kar.
ಅಂಕಿ ಅಂಶ: ತರಬೇತಿಗಾಗಿ ನಿಗದಿಪಡಿಸಿದ ಒಟ್ಟು ಗುರಿಗಳು
ಪುರುಷರು:- 32
ಮಹಿಳೆಯರು:- 16
ಪರಿಶಿಷ್ಟ ಜಾತಿ:- 7
ಪರಿಶಿಷ್ಟ ಪಂಗಡ:- 2
ಇತರೆ:- 39
ತರಬೇತಿಗಾಗಿ ಆಯ್ಕೆಯಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸುವುದು.
ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈಗಾಗಲೇ ಇಲಾಖೆಯಲ್ಲಿ ರೈತ ಮಕ್ಕಳಿಗೆ ಕಾಯ್ದಿರಿಸಿರುವ ಗುರಿಗಳಿಗೆ ಹೆಚ್ಚುವರಿಯಾಗಿ ಸೇರ್ಪಡಿಸಲಾಗುವುದು. ಸದರಿ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ, ವಸತಿನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆಯು ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಸೂಚಿಸಿದೆ. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾವ) ಬಳ್ಳಾರಿ ಇವರನ್ನು ಕಛೇರಿ ವೇಳೆಯಲ್ಲಿ ಮಾಹಿತಿಗಾಗಿ ದೂ. ಸಂಖ್ಯೆ 08392-278588 ಸಂಪರ್ಕಿಸಬಹುದು
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ