https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ :
ನಗರದ ಪಟೇಲ್‌ನಗರದ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ವಿಜಯನಗರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ(ವಾರ್ತಾ ಭವನ) ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ಇಲಾಖೆ ಕಚೇರಿ ಕಟ್ಟಡ ನಿರ್ಮಾಣ ಕುರಿತು ಎಂಜಿನಿಯರ್ ಬಳಿ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಹಂಪಿ ಸ್ಮಾರಕ ಮಾದರಿಯಲ್ಲಿ ಕಚೇರಿ ಕಟ್ಟಡ ನಿರ್ಮಾಣವಾಗಬೇಕು. ಎಂದು ಸೂಚಿಸಿದರು.
ಜಿಲ್ಲಾ ಖನಿಜ ನಿಧಿಯಿಂದ 71 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಜಿ+3 ಮಾದರಿಯಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು, ಭವಿಷ್ಯದಲ್ಲಿ ಹೆಚ್ಚುವರಿ ಅಂತಸ್ತು ನಿರ್ಮಾಣದ ಅನುಕೂಲಕ್ಕಾಗಿ ಅಡಿಪಾಯ ನಿರ್ಮಾಣವನ್ನು ಜಾಗೃತಿಯಿಂದ ಸದೃಢವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಕಚೇರಿ ಸಿಬ್ಬಂದಿ ಸೇರಿದಂತೆ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ವರದಿಗಾರರು ಇದ್ದರು.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ