https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ:
ಕನ್ನಡ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳಾಗಿ ಡಾ. ಡಿವಿ ಪರಮಶಿವಮೂರ್ತಿ ನೇಮಕಗೊಂಡಿದ್ದಾರೆ.
ತುಮಕೂರು ವಿಶ್ವವಿದ್ಯಾಲಯದ ಕೇಂದ್ರದ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಮುಂದಿನ ವರ್ಷಗಳವರೆಗೆ ಕುಲಪತಿಯಾಗಿ ಕರ್ತವ್ಯ ನಿರ್ವಹಿಸಲು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ. ಡಾ.ಸ.ಚಿ.ರಮೇಶ ಅವರ ಅವಧಿ 2023ರ ಫೆಬ್ರವರಿ 22ರಂದು ಮುಕ್ತಾಯಗೊಂಡಿತ್ತು. ತೆರವಾಗಿದ್ದ ಸ್ಥಾನಕ್ಕೆ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊಫೆಸರ್ ಡಾ.ಪಿ. ವಿಜಯಕುಮಾರ್ ಅವರಗೆ ತಾತ್ಕಾಲಿಕವಾಗಿ ಪ್ರಭಾರ ವಹಿಸಲಾಗಿತ್ತು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ