https://youtu.be/NHc6OMSu0K4?si=SI_K4goOPEgwo6h2
ಹಂಪಿಟೈಮ್ಸ್ ಹೊಸಪೇಟೆ:
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಅಧಿಸೂಚನೆ ಹೊರಬೀಳಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ಮೇ.10ಕ್ಕೆ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಚುನಾವಣೆ ಅಕ್ರಮ ತಡೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ 171 ಚೆಕ್ ಪೋಸ್ಟ್ ನಿರ್ಮಾಣ, ಬ್ಯಾಂಕ್ ವ್ಯವಹಾರಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. 2,016 ಫ್ಲೈಯಿಂಗ್ ಸ್ಕ್ಯಾಂಡ್ಸ್, ದಿನದ 24 ಗಂಟೆಯೂ ಅಬಕಾರಿ ಅಧಿಕಾರಿಗಳು ಅಕ್ರಮ ನಡೆಸುವವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ. ಮತದಾನ ಜಾಗೃತಿ ಅಭಿಯಾನದಲ್ಲಿ ಕಾಲೇಜು, ಸ್ಟಾರ್ಟಪ್, ವಿವಿಧ ಸಂಘಸಂಸ್ಥೆಗಳು ಕೈಜೋಡಿಸಿವೆ.
ರಾಜ್ಯಾದ್ಯಂತ 400ಕ್ಕೂ ಹೆಚ್ಚು ಇಕೋ ಫ್ರೆಂಡ್ಲಿ ಮತಕೇಂದ್ರಗಳು, ಗುಡ್ಡಗಾಡು ಜನರಿಗಾಗಿ 40ಕ್ಕೂ ಹೆಚ್ಚು ಮತಕೇಂದ್ರಗಳು, 12 ಸಾವಿರ ಸೂಕ್ಷ್ಮ ಮತಗಟ್ಟೆಗಳು ನಿರ್ಮಾಣಗೊಳ್ಳಲಿದ್ದು, 1,320 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿಗಳು ನಿರ್ವಹಿಸಲಿದ್ದಾರೆ. 34,219 ಗ್ರಾಮಾಂತರ ಮತಗಟ್ಟೆ ತೆರೆಯಲಾಗುವುದು. ಒಂದೊಂದು ಮತಗಟ್ಟೆಗೆ 883 ಮತದಾರರು ಇರಲಿದ್ದಾರೆ. ಏಪ್ರಿಲ್ 1ಕ್ಕೆ 18 ವರ್ಷ ತುಂಬುವವರಿಗೂ ಈ ಬಾರಿ ಮತದಾನ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
SSLC ENGLISH Most Expected Questions
ಡಾ. ಪುನೀತ್ ರಾಜಕುಮಾರ್ ಅವರ ಆಸ್ತಿ ಏನು ಗೊತ್ತೇ? : ನಂದಿನಿ ಸನಬಾಳ್