https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ಸರಕು ಸಾಗಣೆ ವಾಹನದಲ್ಲಿ ಕಾನೂನು ಬಾಹಿರವಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 50ರ ಚೆಕ್‌ಪೋಸ್ಟ್ ಬಳಿ ಆರ್‌ಟಿಓ ಅಧಿಕಾರಿಗಳು ತಡೆದು ಪ್ರಕರಣ ದಾಖಲಿಸಿದ್ದಾರೆ.
ಹೊಸಪೇಟೆ ನೋಂದಣಿ ಸಂಖ್ಯೆ ಹೊಂದಿದ ಸರಕು ವಾಹನ ಮುನಿರಾಬಾದ್‌ನಿಂದ ಕಲ್ಲಹಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಒಟ್ಟು 6 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಮೂರು ದಿನಗಳ ಕಾರ್ಯಾಚರಣೆಯಲ್ಲಿ 22 ಪ್ರಕರಣ ದಾಖಲಿಸಲಾಗಿದ್ದು, 1.68 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚವ್ಹಾಣ್ ತಿಳಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ರಾಜ್ಯಪಾಲರಿಂದ ಹಂಪಿಯ ಐತಿಹಾಸಿಕ ಸುಗ್ರೀವ ಗುಹೆ ವೀಕ್ಷಣೆ