December 5, 2024

Hampi times

Kannada News Portal from Vijayanagara

ಅಪ್ಪಾ, ಅಮ್ಮಾ ಮರಿಯದೇ ವೋಟ್ ಮಾಡಿ

 

https://youtu.be/NHc6OMSu0K4?si=SI_K4goOPEgwo6h2

ಸ್ವೀಪ್ ಸಮಿತಿ ಅಭಿಯಾನ; ವಿದ್ಯಾರ್ಥಿಗಳಿಂದ ಪೋಷಕರಿಗೆ ಪತ್ರ

ಹಂಪಿ ಟೈಮ್ಸ್ ಹೊಸಪೇಟೆ 

ತೀರ್ಥರೂಪ ಅಪ್ಪ-ಅಮ್ಮ,
ನಾನಿಲ್ಲಿ ಕ್ಷೇಮ, ಪರೀಕ್ಷೆಗೆ ಸಿದ್ಧತೆಯನ್ನು ಚೆನ್ನಾಗಿ ಮಾಡುತ್ತಿರುವೆ. ಈ ವರ್ಷ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ನೀವು ಯಾವುದೇ ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ, ಅಕ್ಕ, ಅಣ್ಣನಿಗೂ ಮತದಾನ ಮಾಡಲು ತಿಳಿಸಿ.
ನಿಮ್ಮ ಮಗು/ಮಗಳು
ಇದು ಮನೆಯಿಂದ ದೂರವಿದ್ದು, ಹಾಸ್ಟೆಲ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮತದಾನ ಮಾಡಲು ಪ್ರೇರಣೆ ನೀಡಿ ಬರೆದ ಪತ್ರಗಳ ಸಾರಂಶ.

ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈ ಬಾರಿ ಹೆಚ್ಚು ಹೆಚ್ಚು ಮತದಾರರು ಮತದಾನ ಪ್ರಕ್ರಿಯೆ ಕೈಗೊಳ್ಳಲು ಜಿಲ್ಲಾ ಸ್ವೀಪ್ ಸಮಿತಿ ವಿವಿಧ ಅಭಿಯಾನ ಹಮ್ಮಿಕೊಂಡಿದೆ. ವಿಜಯನಗರ ಜಿಲ್ಲಾ ಸ್ವೀಪ್ ಸಮಿತಿ ‘ವಿದ್ಯಾರ್ಥಿಗಳಿಂದ ಪೋಷಕರಿಗೆ, ಒಡಹುಟ್ಟಿದವರಿಗೆ ಹಾಗೂ ನೆರೆಹೊರೆಯವರಿಗೆ ಪತ್ರ ಅಭಿಯಾನ’ ಎಂಬ ವಿಶೇಷ ಜಾಗೃತಿ ಕೈಗೊಂಡಿದೆ.

ವಿಜಯನಗರ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆದು ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಲಾಯಿತು.

ನಗರದ ಜಂಬುನಾಥ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗೆ ಖುದ್ದು ಭೇಟಿ ನೀಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಬಿ‌. ಸದಾಶಿವ ಪ್ರಭು ಅವರು ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನದ ಅವಶ್ಯಕತೆ ಕುರಿತು ಮಾಹಿತಿಯನ್ನು ನೀಡಿದರು.  ತಮ್ಮ ಊರನ್ನು, ಮನೆಯನ್ನು ಬಿಟ್ಟು ಓದಲು ಆಗಮಿಸಿರುವ ನೀವುಗಳು ನಿಮ್ಮ ಪೋಷಕರಿಗೆ ಪತ್ರ ಬರೆಯುವ ಮೂಲಕ ಯಾವುದೇ ಆಮಿಷಕ್ಕೆ ಒಳಗಾಗದೇ ಸೂಕ್ತ ಅಭ್ಯರ್ಥಿಗೆ ಹಕ್ಕು ಚಲಾಯಿಸುವ ಕುರಿತು ಪ್ರೇರಣೆ ಮಾತುಗಳನ್ನು ಉಲ್ಲೇಖಿಸಿ ಪತ್ರ ಬರೆಯಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಕಡ್ಡಾಯ ಮತದಾನ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ವಿವಿಧ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಕ ಪತ್ರ ಬರೆದು ಪೋಷಕ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದ ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ವಿ.ರಮೇಶ್ ಸೇರಿದಂತೆ ಸ್ವೀಪ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 

 

ಜಾಹೀರಾತು
error: Content is protected !!