https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ :
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ನ್ಯಾಷನಲ್ ಪದವಿಪೂರ್ವ ಕಾಲೇಜ್ ವಿಜ್ಞಾನ ವಿಭಾಗದಲ್ಲಿ ಶೇ.96 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.94 ಸೇರಿದಂತೆ ಒಟ್ಟು ಶೇ.95ರಷ್ಟು ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಆರ್.ಶಶಿಧರ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 65 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 94 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 29 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
2022-23ನೇ ಸಾಲಿನ ವಿಜ್ಞಾನ ವಿಭಾಗದಲ್ಲಿ ಸ್ಪಂದನಾ ವಿ. 579 (96.5%), ಆರ್.ಪ್ರೇರಣಾ 577 (96.16%), ಕುಮುದ್ ಝಿಯಾ ಎ 575 (95.83%) ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಭೂಮಿಕಾ 581 (96.83%), ಸೈಯದ್ ರಿಯಾಜ್ ಅಹ್ಮದ್ 580 (96.66), ಕೆ.ಪ್ರಿಯಾ 567 (94.5%) ಅಂಕ ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜ್‌ನ ಅಡಳಿತ ಮಂಡಳಿ, ಉಪನ್ಯಾಸಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಡಿಸ್ಟಿಂಕ್ಷನ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದು ಸಂತಸ ತಂದಿದೆ. ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿ.ಇ.ಟಿ. ಮತ್ತು ನೀಟ್‌ಗೆ ಕಾಲೇಜಿನಲ್ಲಿ ತರಬೇತಿ ನೀಡುತ್ತಿದ್ದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇನ್ನೂ ಉತ್ತಮ ಅಂಕಗಳನ್ನು ಪಡೆಯುವ ಭರವಸೆ ಹೆಚ್ಚಿಸಿದೆ. ಅನುಭವಿ ಉಪನ್ಯಾಸಕರನ್ನು ಹೊಂದಿದ್ದು, ಉತ್ತಮ ಶಿಕ್ಷಣ ಮತ್ತು ತರಬೇತಿಗೆ ನ್ಯಾಷನಲ್ ಕಾಲೇಜ್ ಹೆಸರಾಗಿದ್ದು, ಜನರ ವಿಶ್ವಾಸವನ್ನು ಉಳಿಸಿಕೊಂಡಿದೆ.
• ಆರ್.ಶಶಿಧರ, ಪ್ರಾಂಶುಪಾಲರು, ನ್ಯಾಷನಲ್ ಪಿಯು ಕಾಲೇಜ್, ಹೊಸಪೇಟೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ