https://youtu.be/NHc6OMSu0K4?si=SI_K4goOPEgwo6h2
ಆದರ್ಶ ರೆಡ್ಡಿಗೆ ವಿಜ್ಞಾನ ವಿಭಾಗದಲ್ಲಿ 590 ಅಂಕ
ಹಂಪಿ ಟೈಮ್ಸ್ ಹಗರಿಬೊಮ್ಮನಹಳ್ಳಿ
ತಾಲೂಕಿನ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಆದರ್ಶ ರೆಡ್ಡಿ ವಿಜ್ಞಾನ ವಿಭಾಗದಲ್ಲಿ 590 ಅಂಕಗಳಿಸಿ ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿರುತ್ತಾರೆ.
ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಎಸ್ ಎಂ ಜ್ಞಾನಾಮೃತ 580 ಹಾಗೂ ವಿಎಂ ಸೃಷ್ಟಿ 579 ಅಂಕಗಳನ್ನು ಗಳಿಸಿದ್ದಾರೆ. ಒಟ್ಟು 89 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದು 93 ವಿದ್ಯಾರ್ಥಿಗಳು ಮೊದಲ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಾಚಾರ್ಯರಾದ ಎಂ ಆರ್ ಶೇಖರ್ ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಆದರ್ಶ ರೆಡ್ಡಿ ವಿದ್ಯಾರ್ಥಿಗೆ ಪ್ರಾಚಾರ್ಯರಾದ ಎಂ ಆರ್ ಶೇಖರ್ ಸಿಹಿ ತಿನಿಸಿ ಶುಭ ಹಾರೈಸಿದರು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ