https://youtu.be/NHc6OMSu0K4?si=SI_K4goOPEgwo6h2
ಸಂತೆ/ಜಾತ್ರೆ ರದ್ದು, ನಿಷೇದಾಜ್ಞೆ ಜಾರಿ
ಹಂಪಿ ಟೈಮ್ಸ್ ಹೊಸಪೇಟೆ :
ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ.10ರಂದು ಮತದಾನ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಮೇ.8ರ ಸೋಮವಾರ ಸಂಜೆ 6 ಗಂಟೆಯಿಂದ ಬುಧವಾರ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ 144 ಅನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶ ಹೊರಡಿಸಿದ್ದಾರೆ.
ಪ್ರತಿಬಂಧಕಾಜ್ಞೆ ಅಡಿಯಲ್ಲಿ ಒಳಪಡುವ ಮಾರ್ಗಸೂಚಿಗಳು:
ಜಿಲ್ಲಾ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಿಕೆ, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು 5 ಜನರಿಗಿಂತ ಹೆಚ್ಚು ಸೇರುವಂತಿಲ್ಲ. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡುವ ಯಾವುದೇ ತೆರನಾದ ಮಾರಕಾಸ್ತç ಜೊತೆಯಲ್ಲಿಟ್ಟುಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ 100 ಮೀ. ಒಳಗಡೆ ಚುನಾವಣೆ ಪ್ರಚಾರ ನಿಷೇಧಿಸುವ ಜೊತೆಗೆ ಮತಕೇಂದ್ರಗಳ ವ್ಯಾಪ್ತಿಯಲ್ಲಿ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶಿಸಲಾಗಿದೆ.
ಮೇ.13 ಶನಿವಾರ ಮತ ಎಣಿಕೆ ನಡೆಯುವ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರದ ಸುತ್ತ ರಕ್ಷಣೆ ಒದಗಿಸಿ ಅನಧಿಕೃತ ಚಟುವಟಿಕೆ ನಿಯಂತ್ರಿಸುವ ಸಲುವಾಗಿ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ