https://youtu.be/NHc6OMSu0K4?si=SI_K4goOPEgwo6h2
ಮೊದಲ ಬಾರಿಗೆ ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ನೀಟ್ ಪರೀಕ್ಷೆ
ಹಂಪಿ ಟೈಮ್ಸ್ ಹೊಸಪೇಟೆ :
ವಿಜಯನಗರ ಜಿಲ್ಲೆಯಲ್ಲಿ ಮೇ.07ರ ಭಾನುವಾರ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.
ಹೊಸಪೇಟೆಯ ವಿಜ್ಞಾನ್ ಇ-ಟೆಕ್ನೊ ಕಾಲೇಜ್, ಶ್ರೀ ಚೈತನ್ಯ ಟೆಕ್ನೊ ಕಿರಿಯ ಪ್ರಾಥಮಿಕ ಶಾಲೆ, ಟಿಎಂಎಇಎಸ್ ರೋಜ್ ಬಡ್ ಶಾಲೆ ಹಾಗೂ ಟಿಎಂಎಇಎಸ್ ಡಿಎವಿ ಪಬ್ಲಿಕ್ ಶಾಲೆಗಳಲ್ಲಿ ಮಧ್ಯಾಹ್ನ 2ರಿಂದ 5.20 ಗಂಟೆಯವರೆಗೆ ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹಾಗೂ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ