https://youtu.be/NHc6OMSu0K4?si=SI_K4goOPEgwo6h2
ಕಾರ್ಮಿಕರಿಗೆ ಸನ್ಮಾನ
ಹಂಪಿ ಟೈಮ್ಸ್ ಹೊಸಪೇಟೆ:
ವಿಜಯನಗರಜಿಲ್ಲಾ ಶರಣ ಸಾಹಿತ್ಯ ಪರಿಷತ್ತುತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೇ 23ರಂದು ಸಂಜೆ 6 ಕ್ಕೆ ನಗರದ ಸರ್ಕಾರಿ ನೌಕರರ ಭವನದಲ್ಲಿಕಾಯಕ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಾ.ಕೆ.ರವೀಂದ್ರನಾಥ ತಿಳಿಸಿದ್ದಾರೆ.
ಕೊಟ್ಟೂರುಸ್ವಾಮಿ ಮಠದ ಜಗದ್ಗರು ಶ್ರೀ ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯವಹಿಸುವರು. ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ.ವಿಠಲರಾವ್ ಗಾಯಕ್ವಾಡ ಉದ್ಘಾಟಿಸಿ, ಉಪನ್ಯಾಸ ನೀಡಲಿದ್ದಾರೆ. ವಿಜಯನಗರ ಜಿಲ್ಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಗೌಡ, ಶ.ಸಾ.ಪ.ಪ್ರಧಾನ ಕಾರ್ಯದರ್ಶಿ ಎನ್.ಎಂ.ರವಿಶಂಕರ, ಆರೋಗ್ಯ ನಿರೀಕ್ಷಣಾಧಿಕಾರಿ ಡಾ. ಎಂ.ಧರ್ಮನಗೌಡ, ಹಿರಿಯ ಪತ್ರಕರ್ತ ಶಶಿಕಾಂತ ಎಸ್.ಶಂಬೆಳ್ಳಿ, ಶ.ಸಾ.ಪ. ತಾಲೂಕಧ್ಯಕ್ಷೆ ಸೌಭಾಗ್ಯಲಕ್ಷ್ಮೀ, ವೇದಿಕೆಯ ಸಂಚಾಲಕಿ ಡಾ.ಅಕ್ಕಮಹಾದೇವಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಕೆ.ರವೀಂದ್ರನಾಥ ಅಧ್ಯಕ್ಷತೆ ವಹಿಸಲಿದ್ದಾರೆ.
ಚಾಲಕ ಬಸವಣ್ಣೆಪ್ಪ, ಕಾರ್ಮಿಕ ರಮೇಶ, ಪರಿಚಾರಕಿಯರಾದ ಎಚ್.ಭಾರತಿ, ಹುಲಿಗೆಮ್ಮ ಹಾಗೂ ಜವಾನ ಕುಮಾರಗೌಡ ಇವರನ್ನುಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ