https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ನಿಂಗಪ್ಪ.ಎಚ್.ಇನ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ವಿಜಯನಗರ ಜಿಲ್ಲಾ ಪಂಚಾಯಿತಿ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸೆ.22ರಂದು ಆದೇಶ ಹೊರಡಿಸಿದ್ದಾರೆ.
ಹಗರಿಬೊಮ್ಮನಹಳ್ಳಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಸೆ.22 ರಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ, ವಸತಿನಿಲಯದಲ್ಲಿ ಕುಡಿಯುವ ನೀರು(ಆರ್.ಓ.ಯುನಿಟ್)ನಲ್ಲಿ ಜಿರಲೆ ಬಿದ್ದಿರುವುದು, ಆಹಾರ ಸಾಮಗ್ರಿಗಳ ಮತ್ತು ವಿತರಣೆ ದಾಖಲೆಗಳ ಅರೆಬರೆ ನಿರ್ವಹಣೆ, ನಿಯಮಾನುಸಾರ ಈವರೆಗೂ ನಿರ್ವಹಿಸದೇ ಇರುವುದು. ಸರ್ಕಾರಿ ಆದೇಶಗಳನ್ನು ಪಾಲಿಸದೇ ವಸತಿ ನಿಲಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಜಿಲ್ಲಾಧಿಕಾರಿಗಳ ವರದಿ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿಗಳ ನಿಯಮದಡಿ ಅಧಿಕಾರ ಚಲಾಯಿಸಿ ಅಮಾನತ್ತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
More Stories
ಕಾಂಗ್ರೆಸ್ ಅನ್ನಪೂರ್ಣಮ್ಮಗೆ ಗೆಲುವು ನಿಶ್ಚಿತ : ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ ಅಭಿಮತ
ಪೊಲೀಸರ ಬದುಕಿನ ಬಹುಪಾಲು ಸಮಯ ನಮ್ಮೆಲ್ಲರ ಒಳಿತಿಗಾಗಿ ಮೀಸಲು : ವೀಣಾ ಹೇಮಂತ್ಗೌಡ ಪಾಟೀಲ್
ಮೊದಲ ಉದ್ಯೋಗ ಮೇಳದಲ್ಲಿ 417 ಅಭ್ಯರ್ಥಿಗಳು ಆಯ್ಕೆ, 9 ಲಕ್ಷ ರೂ.ವರೆಗೆ ಪ್ಯಾಕೇಜ್ : ಮೆಟ್ರಿ ಮಲ್ಲಿಕಾರ್ಜುನ