December 5, 2024

Hampi times

Kannada News Portal from Vijayanagara

ಒಂದೇ ಸೂರಿನಡಿ ವಿವಿಧ ಇಲಾಖೆಗಳ ಅಹವಾಲು ಸ್ವೀಕಾರ ಸೆ.25ರಂದು ‘ಜನತಾ ದರ್ಶನ’

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ 

ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಲು ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಸೆ.25ರಂದು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ಆಯೋಜಿಸಲಾಗಿದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್‌ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡುವರು. ಮತ್ತು ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ ಯಾವುದೇ ಕುಂದುಕೊರತೆ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದಾಗಿದೆ.
ವಿವಿಧ ಇಲಾಖೆಯ 20 ಕೌಂಟರ್ ಸ್ಥಾಪನೆ: ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ 20 ಕೌಂಟರ್ ಸ್ಥಾಪಿಸಲಾಗಿದ್ದು, ಕಾರ್ಯಕ್ರಮದಲ್ಲಿ ಒಂದೇ ಸೂರಿನಡಿ ಪ್ರತಿ ಇಲಾಖೆಗೂ ಪ್ರತ್ಯೇಕ ಕೌಂಟರ್ ತೆರೆಯಲಾಗಿದ್ದು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಲಾ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು, ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಎಲ್ಲಾ ನಿಗಮ ಮಂಡಳಿಗಳು, ಶಿಕ್ಷಣ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗೃಹ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ನೀರಾವರಿ, ನಗರಾಭಿವೃದ್ಧಿ, ಹಂಪಿ ವಿಶ್ವಪಾರಪಂರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ(ಹವಾಮಾ), ಕಾರ್ಮಿಕ, ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‌ಟಿಒ‌), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಜಿಲ್ಲೆಯ ನಾಗರಿಕರು ಕಾರ್ಯಕ್ರಮದಲ್ಲಿ ತಮ್ಮ ಅರ್ಜಿ ಮತ್ತು ಅಹವಾಲುಗಳನ್ನು ಸಲ್ಲಿಸಿ ಜನತಾ ದರ್ಶನದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಡಿಸಿ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!