June 14, 2025

Hampi times

Kannada News Portal from Vijayanagara

ಜಿಲ್ಲೆಯಾದ್ಯಂತ ಅ.01ರಂದು ‘ಬೃಹತ್ ಸ್ವಚ್ಛತಾ ಅಭಿಯಾನ’

https://youtu.be/NHc6OMSu0K4?si=SI_K4goOPEgwo6h2

 

ಜಿಲ್ಲೆಯಾದ್ಯಂತ ಅ.01ರಂದು ‘ಬೃಹತ್ ಸ್ವಚ್ಛತಾ ಅಭಿಯಾನ’: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು

ಹಂಪಿ ಟೈಮ್ಸ್ ಬಳ್ಳಾರಿ:

ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ಗ್ರಾಮಗಳಲ್ಲಿ ಸಂಪೂರ್ಣ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅ.01ರಂದು “ಬೃಹತ್ ಸ್ಚಚ್ಛತಾ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.

ಅ.02ರಂದು ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ‘ಸ್ವಚ್ಛ ಭಾರತ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಅವರ ಧ್ಯೇಯವಾಕ್ಯ ‘ಸ್ವಚ್ಛತೆಯೇ ದೈವತ್ವ’ ಎಂಬ ಕನಸನ್ನು ನನಸಾಗಿಸಲು ಸೆ.15ರಿಂದ ಅ.02ರವರೆಗೆ 15 ದಿನಗಳ ಕಾಲ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರು ತಿಳಿಸಿದ್ದಾರೆ.

ಆದ್ದರಿಂದ ಅ.01ರಂದು “ಬೃಹತ್ ಸ್ವಚ್ಛತಾ ಅಭಿಯಾನ” ಕಾರ್ಯಕ್ರಮವನ್ನು ಆಯಾ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಸ್ವಚ್ಛಗಾಹಿಗಳು, ಸ್ವ-ಸಹಾಯ ಗುಂಪುಗಳು, ಎನ್.ಎಸ್.ಎಸ್, ಎನ್.ಸಿ.ಸಿ.ಕ್ರೆಡೆಟ್‍ಗಳು, ನೆಹರು ಕೇಂದ್ರ ಸ್ವಯಂ ಸೇವಕರು, ಮಾರುಕಟ್ಟೆ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದ್ದಾರೆ.

ಇದರಲ್ಲಿ ನ್ಯೂನತೆಗಳು ಹಾಗೂ ಬೇಜವಾಬ್ದಾರಿತನ ತೋರಿಸಿದಲ್ಲಿ ಸಂಬಂಧಿಸಿದ ಇಲಾಖಾ ಮುಖ್ಯಸ್ಥರು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದೂ ತಿಳಿಸಿದ್ದಾರೆ.

ಶ್ರಮದಾನ ಹಮ್ಮಿಕೊಳ್ಳುವ ಸ್ಥಳಗಳು: ಗ್ರಾಮ ಪಂಚಾಯತಿ ವ್ಯಾಪ್ತಿಯ ನೀರಿನ ಮೂಲಗಳ ಸುತ್ತ-ಮುತ್ತಲು, ಬಸ್ ನಿಲ್ದಾಣ ಮತ್ತು ಕಲ್ಯಾಣಿಗಳ ಸ್ವಚ್ಛತೆ. ಶಿಕ್ಷಣ ಇಲಾಖೆ ವ್ಯಾಪ್ತಿಯ ಶಾಲಾ ಆವರಣ ಸ್ವಚ್ಛತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಂಗನವಾಡಿ ಆವರಣ ಸ್ವಚ್ಛತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ  ಎಲ್ಲಾ ಆಸ್ಪತ್ರೆಗಳ ಆವರಣ ಸ್ವಚ್ಛತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳ ಆವರಣ ಸ್ವಚ್ಛತೆ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳ ಆವರಣ ಸ್ವಚ್ಛತೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಸಂಜೀವಿನಿ ಒಕ್ಕೂಟದಡಿ ದೇವಸ್ಥಾನ ಮತ್ತು ಇತರೆ ಸಾರ್ವಜನಿಕ ಸ್ಥಳಗಳು.

 

ಜಾಹೀರಾತು
error: Content is protected !!