June 14, 2025

Hampi times

Kannada News Portal from Vijayanagara

ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ

https://youtu.be/NHc6OMSu0K4?si=SI_K4goOPEgwo6h2

 

ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮನವಿ
ಹಂಪಿ ಟೈಮ್ಸ ಕೊಪ್ಪಳ :
ಗೌರವಾನ್ವಿತ ಉಪಲೋಕಾಯುಕ್ತರಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮವು ಅಕ್ಟೋಬರ್ 07ರಿಂದ ಅ. 09ರ ವರೆಗೆ  ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್‌ ಅವರು ತಿಳಿಸಿದ್ದಾರೆ.
ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅ. 09ರ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 01-30 ರವರೆಗೆ ಹಾಗೂ ಮಧ್ಯಾಹ್ನ 02.30 ರಿಂದ 05 ಗಂಟೆಯವರೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತ ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು ಹಾಗೂ ಸದುಪಯೋಗವನ್ನು ಪಡೆದುಕೊಳ್ಳವ ಜೊತೆಗೆ ಇದೆ ಅವಧಿಯಲ್ಲಿ ಅ. 7ರಿಂದ ಅ. 9ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 02.30ರಿಂದ ಸಂಜೆ, 05 ಗಂಟೆಯವರೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಪಟ್ಟಂತೆ (ಗೌರವಾನ್ವಿತ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯವಾಪ್ತಿಗೆ ಒಳಪಡುವ ಪ್ರಕರಣಗಳಿಗೆ ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆಯನ್ನು ಗೌರವಾನ್ವಿತ ಉಪಲೋಕಾಯುಕ್ತರು ನಡೆಸುತ್ತಾರೆ. ಆದ್ದರಿಂದ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯ ಪ್ರಕಟಣೆ ತಿಳಿಸಿದೆ.

 

ಜಾಹೀರಾತು
error: Content is protected !!