https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಕೊಪ್ಪಳ:
2023-24ನೇ ಸಾಳಿನ ಎಂ.ಎ.ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ., ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಪ್ರವೇಶಾತಿಯನ್ನು UUCMS(https://uucms.karnataka .gov.in/) ತಂತ್ರಾಶದ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06.10.2023 ರಿಂದ ಆರಂಭಗೊಂಡು ದಿನಾಂಕ 20.11.2023 ರಂದು ಅಂತ್ಯಗೊಳ್ಳಲಿದೆ.
ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿವಿ ಕುಲಸಚಿವರು ತಿಳಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ