https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ ಕೊಪ್ಪಳ:
ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಆಗಿರುವ ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01.11.2023ಕ್ಕೆ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಪ್ರಾರಂಭವಾಗುತ್ತದೆ. ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ಭಾರತ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಪ್ರಾದೇಶಿಕ ಆಯುಕ್ತರು, ಕಲಬುರಗಿ ಹಾಗೂ ಮತದಾರರ ನೋಂದಣಾಧಿಕಾರಿಗಳು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ಕಲಬುರಗಿ ಇವರು ಸೂಚಿಸಿರುತ್ತಾರೆ.
ವೇಳಾಪಟ್ಟಿ: ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಅರ್ಜಿ ನಮೂನೆ 18ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 06 ಕೊನೆಯ ದಿನ, ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 23 ರಿಂದ ಡಿಸೆಂಬರ್ 09ರ ವರೆಗೆ ಅವಧಿ ನಿಗದಿಪಡಿಸಿದೆ ಮತ್ತು ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ