December 8, 2024

Hampi times

Kannada News Portal from Vijayanagara

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ ಬಳ್ಳಾರಿ:
ಕರ್ನಾಟಕ ಒಕ್ಕಲಿಕ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ / ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ  ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಗಳು ಮತ್ತು ಸೌಲಭ್ಯಗಳು:
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸಣ್ಣ ಮತ್ತು ಅತಿ ಸಣ್ಣ  ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ, ತೆರೆದ ಬಾವಿ, ಸಾಮೂಹಿಕ ಏತ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಸಾಲ ಸೌಲಭ್ಯ ನೀಡಲಾಗುತ್ತದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಶಾಸಕರ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿದಾರರು ಸೇವಾಸಿಂಧು ಪೋರ್ಟಲ್,  ಗ್ರಾಮಒನ್, ಬೆಂಗಳೂರು ಒನ್, ಹಾಗೂ ಕರ್ನಾಟಕ ಒನ್‍ಗಳ ಮೂಲಕ  ಮತ್ತು ಸ್ವಾತಂತ್ರ ಅಮೃತ ಮುನ್ನಡೆ    ಯೋಜನೆಗೆ   ಅರ್ಜಿಯನ್ನು   ಕೌಶಲ್ಯ  ಕರ್ನಾಟಕ    ತಂತ್ರಾಶದ  https://www.kaushalkar.com ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನ ಎದುರುಗಡೆಯ ವೀರನಗೌಡ ಕಾಲೋನಿಯ  ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು.

 

 

ಜಾಹೀರಾತು
error: Content is protected !!