November 11, 2024

Hampi times

Kannada News Portal from Vijayanagara

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್‌  ಕೊಪ್ಪಳ:
ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 1 ರಿಂದ 10ನೇ ತರಗತಿ ಹೊಸ ವಿದ್ಯಾರ್ಥಿಗಳು ವೆಬ್ ಸೈಟ್   https://ssp.karnataka.gov.in/ssp2324/homepage.aspx ನಲ್ಲಿ ಅಕ್ಟೋಬರ್ 20ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಕಳೆದ ವರ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿದ್ದರೆ ಹೊಸ ಅರ್ಜಿ ಸಲ್ಲಿಸಬೇಕು. ಕಳೆದ ವರ್ಷ ವಿದ್ಯಾರ್ಥಿವೇತನ ಯಶಸ್ವಿಯಾಗಿ ಜಮಾ ಆಗಿದ್ದರೆ ಹೊಸದಾಗಿ ಅರ್ಜಿ ಸಲ್ಲಿಸುವುದು ಅಗತ್ಯವಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ರವರ ಕಚೇರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 

 

ಜಾಹೀರಾತು
error: Content is protected !!