https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಕೊಪ್ಪಳ :
2023ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ವಿಭಾಗ ಮಟ್ಟದ ಖೋಖೋ, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡಬಾಲ್ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಕ್ರೀಡಾ ಧ್ವಜಾರೋಹಣ ಹಾಗೂ ಕ್ರೀಡಾ ಜ್ಯೋತಿ ಬೆಳಗಿಸಿ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನುಷ್ಯನ ಆರೋಗ್ಯ ಸ್ಥೀರತೆ, ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆ ಅತ್ಯವಶ್ಯಕವಾಗಿದೆ. ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯ ಹವ್ಯಾಸಗಳನ್ನು ಬೇಳಸಿಕೊಳ್ಳಿ. ಪಾಲಕರು, ಶಿಕ್ಷಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಬೇಕು. ಕ್ರೀಡೆಯಲ್ಲಿ ಸೋಲು – ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ಈ ಕ್ರೀಡಾಕೂಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಮುಂದೆ ರಾಜ್ಯ ಮಟ್ಟದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ ಜಾಬಗೌಡರ ಅವರು ಮಾತನಾಡಿ, ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಂಘಟಿಸಲಾಗಿದೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಖೋಖೋ, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡಬಾಲ್ ಸ್ಪರ್ಧೆಗಳು ನಡೆಯುತ್ತಿದ್ದು, ಈ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟದ ವಿಜೇತ ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷರಾದ ಎಸ್.ಬಿ ನಾಗರಳ್ಳಿ, ಗಣ್ಯರಾದ ಕೃಷ್ಣ ಇಟ್ಟಂಗಿ, ಹ್ಯಾಂಡಬಾಲ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ಶ್ರೀಕಾಂತ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ಬಸವರಾಜ, ತಾಲೂಕಿನ ಕ್ರೀಡಾಧಿಕಾರಿಗಳಾದ ಶರಣಬಸವ ಬಂಡಿಹಾಳ, ತಾಲೂಕು ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿರುಪಾಕ್ಷಪ್ಪ ಬಾಗೊಡಿ ಸೇರಿದಂತೆ ದೈಹಿಕ ಶಿಕ್ಷಕರು, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಕ್ರೀಡಾಪಟುಗಳು ಉಪಸ್ಥಿತರಿದ್ದರು.
More Stories
ಕಾಂಗ್ರೆಸ್ ಅನ್ನಪೂರ್ಣಮ್ಮಗೆ ಗೆಲುವು ನಿಶ್ಚಿತ : ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ ಅಭಿಮತ
ಪೊಲೀಸರ ಬದುಕಿನ ಬಹುಪಾಲು ಸಮಯ ನಮ್ಮೆಲ್ಲರ ಒಳಿತಿಗಾಗಿ ಮೀಸಲು : ವೀಣಾ ಹೇಮಂತ್ಗೌಡ ಪಾಟೀಲ್
ಮೊದಲ ಉದ್ಯೋಗ ಮೇಳದಲ್ಲಿ 417 ಅಭ್ಯರ್ಥಿಗಳು ಆಯ್ಕೆ, 9 ಲಕ್ಷ ರೂ.ವರೆಗೆ ಪ್ಯಾಕೇಜ್ : ಮೆಟ್ರಿ ಮಲ್ಲಿಕಾರ್ಜುನ