July 16, 2025

Hampi times

Kannada News Portal from Vijayanagara

ಲೋಕಾಯುಕ್ತರ ಜನ ಸಂಪರ್ಕ ಸಭೆ/ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಅ.11ರಿಂದ

https://youtu.be/NHc6OMSu0K4?si=SI_K4goOPEgwo6h2

 


ಹಂಪಿ ಟೈಮ್ಸ್ ಬಳ್ಳಾರಿ:
ಬಳ್ಳಾರಿ ವಿಭಾಗದ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಎಂ.ಎನ್.ಶಶಿಧರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ್ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಜಿಲ್ಲೆಯ ಸಂಡೂರು, ಕುರುಗೋಡು ಮತ್ತು ಸಿರುಗುಪ್ಪ ತಾಲೂಕು ಕೇಂದ್ರಗಳಲ್ಲಿ ಅಕ್ಟೋಬರ್ 11ರಿಂದ ಜನ ಸಂಪರ್ಕ ಸಭೆ/ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಸಲಿದ್ದಾರೆ.

ಅ.11ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 02ರವರೆಗೆ ಸಂಡೂರು ತಹಶೀಲ್ದಾರರ ಕಚೇರಿಯ ಸಭಾಂಗಣ, ಅ.17ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 02ರವರೆಗೆ ಕುರುಗೋಡು ತಹಶೀಲ್ದಾರರ ಕಚೇರಿಯ ಸಭಾಂಗಣ ಮತ್ತು ಅ.19ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 02ರವರೆಗೆ ಸಿರುಗುಪ್ಪ ತಹಶೀಲ್ದಾರರ ಕಚೇರಿಯ ಸಭಾಂಗಣದಲ್ಲಿ ಲೋಕಾಯುಕ್ತರ ಜನ ಸಂಪರ್ಕ ಸಭೆ ನಡೆಯಲಿದೆ.

ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ಗಳನ್ನು ಸಹ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕ ಎಂ.ಎನ್.ಶಶಿಧರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
error: Content is protected !!