https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ ಬಳ್ಳಾರಿ:
ಮೈಸೂರು ದಸರಾ ಉತ್ಸವ-2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಅ.15ರಿಂದ 23ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ. ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಬೇಕು.
ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಂದರೆ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.12ರಂದು ಸಂಜೆ 5ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು–560002, ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಬೇಕು. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ.ರಸ್ತೆಯ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಚೇರಿ ಹಾಗೂ ದೂ:080-22484516/ 22107704 ಗೆ ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ