December 8, 2024

Hampi times

Kannada News Portal from Vijayanagara

ವಿಕಲಚೇತನ ವಿದ್ಯಾರ್ಥಿಗಳಿಗೆ ನ್ಯಾಷನಲ್ ಇ-ಸ್ಕಾಲರ್‌ಶಿಪ್: ಅರ್ಜಿ ಆಹ್ವಾನ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ ಕೊಪ್ಪಳ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಿ-ಮೆಟ್ರಿಕ್ ಅರ್ಜಿ ಸಲ್ಲಿಸಲು ನವಂಬರ್ 30 ಕೊನೆಯ ದಿನವಾಗಿದೆ ಮತ್ತು ಪೋಷ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‌ಸೈಟ್  https.scholarships.gov.in ರಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಎಂ.ಆರ್.ಡಬ್ಲೂö್ಯ.ಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: 9980126391, ಯಲಬುರ್ಗಾದ ಬಸನಗೌಡ ಮೊ.ಸಂ: 9964803047, ಕುಷ್ಟಗಿಯ ಚಂದ್ರಶೇಕರ ಮೊ.ಸಂ: 9916308585, ಗಂಗಾವತಿಯ ಮಂಜುಳಾ ಮೊ.ಸಂ: 7975398202, ಇವರನ್ನು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಯೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಕಚೇರಿಯ ದೂರವಾಣಿ ಸಂಖ್ಯೆ: 08539-200460 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!