June 14, 2025

Hampi times

Kannada News Portal from Vijayanagara

ನಿಜಶರಣ ಅಂಬಿಗರ ಚೌಡಯ್ಯ ನಿಗಮ; ಅರ್ಜಿ ಆಹ್ವಾನ

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್ ಹೊಸಪೇಟೆ:

ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಕೆ. ಭೀಮಪ್ಪ ಅವರು ತಿಳಿಸಿದ್ದಾರೆ.

ಪ್ರವರ್ಗ-1ರ 6(ಚಿ) ಯಿಂದ 6(ಚಿಞ) ವರೆಗೆ ಬರುವ ಬೆಸ್ತ, ಅಂಬಿಗ, ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನ.2ರೊಳಗೆ ಅರ್ಜಿ ಸಲ್ಲಿಸಬೇಕು, ಗ್ರಾಮ-ಒನ್, ಬೆಂಗಳೂರು-ಒನ್, ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಸೌಲಭ್ಯ ಪಡೆಯಲು ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಬೇಕು,

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ  http://ambigaradevelopment.karnataka.gov.in ಅಥವಾ ನಿಗಮದ ಸಹಾಯವಾಣಿ.080-22864099 ಅಥವಾ ಹೊಸಪೇಟೆ ತಾಲ್ಲೂಕು ಕಚೇರಿಯ ಮೊದಲನೇ ಮಹಡಿ ಕೊಠಡಿ ಸಂಖ್ಯೆ 4ರಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಬಹುದು. ದೂ.08392-267038.

 

ಜಾಹೀರಾತು
error: Content is protected !!