June 14, 2025

Hampi times

Kannada News Portal from Vijayanagara

ಸಹಕಾರ ರತ್ನ ಪ್ರಶಸ್ತಿಗೆ ವಿವರ ಸಲ್ಲಿಸಲು ಸೂಚನೆ

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್ ಕೊಪ್ಪಳ: 
ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ `ಸಹಕಾರ ರತ್ನ ಪ್ರಶಸ್ತಿ’ ನೀಡುವ ಸಲುವಾಗಿ 2023ನೇ ಸಾಲಿನ ಪ್ರಶಸ್ತಿಗೆ ಅರ್ಹರಾದ ಸಹಕಾರಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಅರ್ಹರು ತಮ್ಮ ವಿವರವನ್ನು ಸಲ್ಲಿಸುವಂತೆ ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರಾದ ದಸ್ತಗೀರ ಅಲಿ ಅವರು ತಿಳಿಸಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ ಕೊಪ್ಪಳ ಜಿಲ್ಲೆಯಲ್ಲಿಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು, ಕೊಪ್ಪಳ ಇವರಿಗೆ ಅಕ್ಟೋಬರ್ 10ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

 

ಜಾಹೀರಾತು
error: Content is protected !!