https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೂವಿನ ಹಡಗಲಿ
ಬರಗಾಲ ಘೋಷಣೆ ಮಾಡಿದ ರಾಜ್ಯದ ಪ್ರತಿ ತಾಲೂಕಿಗೆ 10 ಕೋಟಿ ಪರಿಹಾರವನ್ನು ವಿತರಿಸಬೇಕೆಂದು ಮಾಜಿ ಡಿ.ಸಿ.ಎಂ.ಗೋವಿಂದ ಕಾರಜೋಳ ಒತ್ತಾಯಿಸಿದರು.
ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ ಬರಗಾಲ ಘೋಷಣೆ ಯಾಗಿದೆ.ಆದರೆ ರಾಜ್ಯ ಸರ್ಕಾರ ಇದುವರೆಗೂ ರೈತರ ನೆರವಿಗೆ ಬರುತ್ತಿಲ್ಲ. ಕೂಡಲೇ ರೈತರಿಗೆ ಬರಪರಿಹಾರ ಕೊಡಬೇಕು. ಗೋಶಾಲೆಗಳನ್ನು ತೆರೆಯಬೇಕು ಹಾಗೂ ಬರಗಾಲ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಪ್ರತಿ ತಾಲೂಕಿಗೆ ಕೂಡಲೇ 10 ಕೋಟಿ ಬರಪರಿಹಾರವನ್ನು ನೀಡಬೇಕು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗುವಂತಾಗಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಕೇವಲ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲವಿದೆ ಅದರೆ ಇತರೆ ರಾಜ್ಯಗಳ ಚುನಾವಣೆಗೆ ಶಾಸಕರನ್ನು ನಿಯೋಜನೆ ಮಾಡುತ್ತಿರುವುದು ಸರಿಯಲ್ಲ. ಶಾಸಕರು ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಸ್ಪಂದಿಸಬೇಕಿದೆ ಎಂದು ಹೇಳಿದರು.
ಹುಬ್ಬಳ್ಳಿ ಶಾಸಕ ಹಾಗೂ ರಾಜ್ಯ ಬಿಜೆಪಿ.ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಾಸಕ ಕೃಷ್ಣನಾಯ್ಕ ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪನವರು, ಬಿ.ಜೆ.ಪಿ.ಪಕ್ಷದ ಜಿಲ್ಲಾಧ್ಯಕ್ಷ ಬಸವನಗೌಡ ಪಾಟೀಲ್, ಹಿರಿಯ ಮುಖಂಡರಾದ ಚಂದ್ರಶೇಖರ್, ಹನುಮಂತಪ್ಪನವರು ಮಂಡಲ ಅಧ್ಯಕ್ಷ ಸಂಜೀವರೆಡ್ಡಿ, ಎಚ್.ಪೂಜಪ್ಪ, ಈ.ಟಿ.ಲಿಂಗರಾಜ್, ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ