https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಕೊಪ್ಪಳ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ನೇತೃತ್ವದಲ್ಲಿ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ನಗರದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತ (ಮುನ್ಸಿಪಾಲಿಟಿ) ಯೋಜನೆಯಡಿಯಲ್ಲಿ ಅಂದಾಜು ಮೊತ್ತ 1799.76 ಲಕ್ಷ ರೂ.ವೆಚ್ಚದಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ನಡೆಯುವ ಕಾಮಗಾರಿಗಳ ಭೂಮಿಪೂಜಾ ಕಾರ್ಯಕ್ರಮವು ನವೆಂಬರ್ 15ರ ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಬಸವೇಶ್ವರ ವೃತ್ತ (ಗವಿಮಠ ರಸ್ತೆ) ಬಳಿ ನೆರವೇರಲಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ